ಬೆಳ್ತಂಗಡಿ, ಸೆಪ್ಟೆಂಬರ್ 11, 2023 (ಕರಾವಳಿ ಟೈಮ್ಸ್) : ತಾಲೂಕಿನ ನಡ ಗ್ರಾಮದ ಸರಕಾರಿ ಪ್ರೌಢಶಾಲೆಗೆ ನುಗ್ಗಿದ ಕಳ್ಳರು ಡಿವಿಆರ್ ಹಾಗೂ ನಗದು ಕದ್ದೊಯ್ದ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯ ಯಾಕೂಬ್ ಎಸ್ ಅವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಭಾನುವಾರ ಬೆಳಗ್ಗಿನಿಂದ ಸೋಮವಾರ ಬೆಳಗ್ಗಿನ ನಡುವಿನ ಅವಧಿಯಲ್ಲಿ ಶಾಲಾ ಕಚೇರಿಯ ಮಾಡಿನ ಹಂಚು ತೆಗೆದು ಒಳನುಗ್ಗಿದ ಕಳ್ಳರು ಕಚೇರಿಯ ಅಲ್ಮೆರಾಗಳನ್ನು ಮಿಟಿ ತೆಗೆದು ಹುಡುಕಾಡಿ ಕಛೇರಿಯಲ್ಲಿದ್ದ ಸುಮಾರು 50 ಸಾವಿರ ರೂಪಾಯಿ ಮೌಲ್ಯ ಡಿ ವಿ ಆರ್ ಹಾಗೂ ಲಾಕರ್ ಒಳಗಿದ್ದ 4 ಸಾವಿರ ರೂಪಾಯಿ ನಗದು ಹಣವನ್ನು ಎಗರಿಸಿದ್ದಾರೆ. ಅಲ್ಲದೆ ಪದವಿಪೂರ್ವ ಕಾಲೇಜಿನ ಕಚೇರಿಯ ಕೀಟಕಿಯ ಸರಳನ್ನು ಮುರಿದು ಒಳ ಪ್ರವೇಶಿಸಿ ಅಲ್ಲಿದ್ದ ಆಲ್ಮೆರಾಗಳನ್ನು ಹುಡುಕಾಡಿ ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 84/2023 ಕಲಂ 454, 457, 380 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment