ಸುಳ್ಯ, ಸೆಪ್ಟೆಂಬರ್ 17, 2023 (ಕರಾವಳಿ ಟೈಮ್ಸ್) : ಸುಳ್ಯ ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ ಶನಿವಾರ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಆರೋಪಿಯನ್ನು ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿ ಸುಬ್ರಮಣಿ (26) ಎಂದು ಗುರುತಿಸಲಾಗಿದೆ. ಪ್ರಕರಣ ನಡೆದು ಕೆಲವೇ ಗಂಟೆಗೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಸುಳ್ಯ ಪೊಲೀಸರು ಆರೋಪಿಯನ್ನು ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿಂದ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಈ ಹಿಂದೆ ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಹಾಗೂ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಅಲ್ಲದೆ ಇತ್ತೀಚೆಗೆ ಕೆಲ ದಿನಗಳ ಹಿಂದೆ ಸುಳ್ಯ ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರ ಪರ್ಸ್ ತೆಗೆದುಕೊಂಡು ಹೋಗಿರುವುದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
















0 comments:
Post a Comment