ಫರಂಗಿಪೇಟೆ : ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿಯಾಗಿ ಆಸ್ಪತ್ರೆಗೆ - Karavali Times ಫರಂಗಿಪೇಟೆ : ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿಯಾಗಿ ಆಸ್ಪತ್ರೆಗೆ - Karavali Times

728x90

24 September 2023

ಫರಂಗಿಪೇಟೆ : ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿಯಾಗಿ ಆಸ್ಪತ್ರೆಗೆ

ಬಂಟ್ವಾಳ, ಸೆಪ್ಟೆಂಬರ್ 24, 2023 (ಕರಾವಳಿ ಟೈಮ್ಸ್) : ತಾಲೂಕಿನ ಫರಂಗಿಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ಶ್ಯಾಮರಾಯ ಆಚಾರ್ಯ (54) ಎಂಬವರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೆ 22 ರಂದು ಸಂಜೆ ನಡೆದಿದೆ. 

ಪುದು ಗ್ರಾಮದ ಫರಂಗಿಪೇಟೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಶ್ಯಾಮರಾಯ ಆಚಾರ್ಯ ಅವರು ದಾಟುತ್ತಿದ್ದ ವೇಳೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಘಟನೆಯಿಂದ ರಸ್ತೆಗೆಸೆಯಲ್ಪಟ್ಟು ಗಾಯಗೊಂಡ ಶ್ಯಾಮರಾಯ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಫರಂಗಿಪೇಟೆ : ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿಯಾಗಿ ಆಸ್ಪತ್ರೆಗೆ Rating: 5 Reviewed By: karavali Times
Scroll to Top