ಆನ್ ಲೈನ್ ಉದ್ಯೋಗದ ಹೆಸರಲ್ಲಿ ಲಕ್ಷಾಂತರ ರೂಪಾಯಿ ಪಂಗನಾಮ : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಆನ್ ಲೈನ್ ಉದ್ಯೋಗದ ಹೆಸರಲ್ಲಿ ಲಕ್ಷಾಂತರ ರೂಪಾಯಿ ಪಂಗನಾಮ : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

26 October 2023

ಆನ್ ಲೈನ್ ಉದ್ಯೋಗದ ಹೆಸರಲ್ಲಿ ಲಕ್ಷಾಂತರ ರೂಪಾಯಿ ಪಂಗನಾಮ : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ, ಅಕ್ಟೋಬರ್ 26, 2023 (ಕರಾವಳಿ ಟೈಮ್ಸ್) : ಆನ್ ಲೈನ್ ಉದ್ಯೋಗ ಒದಗಿಸಿಕೊಡುವ ನೆಪದಲ್ಲಿ ಮಹಿಳೆಯೋರ್ವರಿಂದ ಅಪರಿಚಿತ ಆರೋಪಿಗಳು ಲಕ್ಷಾಂತರ ರೂಪಾಯಿ ವರ್ಗಾಯಿಸಿಕೊಂಡು ವಂಚಿಸಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಧರ್ಮಸ್ಥಳ ಗ್ರಾಮದ ಕಾಯರ್ತ್ತಡ್ಕ ನಿವಾಸಿ ಉಷಾ ಪಿ ವಿ (41) ಎಂಬವರೇ ಆನ್ ಲೈನ್ ಉದ್ಯೋಗದ ಹೆಸರಿನಲ್ಲಿ ವಂಚನೆಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಮಹಿಳೆ. ಉಷಾ ಅವರಿಗೆ ಅಕ್ಟೋಬರ್ 9ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆಮಾಡಿ ಆನ್ ಲೈನ್ ಜಾಬ್ ಆಫರ್ ಕೊಟ್ಟಿದ್ದು, ಅದರಂತೆ ಉಷಾ ಅವರು ಕೆಲಸ ಪ್ರಾರಂಭಿಸಿದ್ದಾರೆ. ಬಳಿಕ ಅಪರಿಚಿತ ಆರೋಪಿಗಳು ಉಷಾ ಅವರಿಗೆ ವಿವಿಧ ಕಾರಣಗಳನ್ನು ತಿಳಿಸಿ, ಅವರಿಂದ ಒಟ್ಟು 4,25,934/- ರೂಪಾಯಿಗಳನ್ನು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ಮೋಸ ಮಾಡಿರುತ್ತಾರೆ ಎಂದು ದೂರಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 85/2023 ಕಲಂ 419, 420 ಐಪಿಸಿ 66(ಸಿ) 66(ಡಿ) ಐಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಆನ್ ಲೈನ್ ಉದ್ಯೋಗದ ಹೆಸರಲ್ಲಿ ಲಕ್ಷಾಂತರ ರೂಪಾಯಿ ಪಂಗನಾಮ : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top