ಬೆಳ್ತಂಗಡಿ, ನವೆಂಬರ್ 24, 2023 (ಕರಾವಳಿ ಟೈಮ್ಸ್) : ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉಜಿರೆಯಲ್ಲಿ ಗುರುವಾರ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ದೀಕ್ಷಿತ್ (19) ಎಂದು ಹೆಸರಿಸಲಾಗಿದೆ. ಗುರುವಾರ ಮಧ್ಯಾಹ್ನ ದೀಕ್ಷಿತ್ ಚಲಾಯಿಸುತ್ತಿದ್ದ ಬೈಕ್ ಉಜಿರೆ ಎಸ್ ಎಲ್ ವಿ ಸೂಪರ್ ಮಾರ್ಕೆಟ್ ಬಳಿ ಚಾಲಕನ ನಿಯಂತ್ರಣ ಮೀರಿ ಸ್ಕಿಡ್ ಆಗಿ ರಸ್ತೆ ಬದಿ ಡಿವೈಡರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ದೀಕ್ಷಿತ್ ನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದ ಅವರು ಸಂಜೆ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment