ಬ್ರಹ್ಮರಕೂಟ್ಲು : ಗೂಡ್ಸ್ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ್ಯು - Karavali Times ಬ್ರಹ್ಮರಕೂಟ್ಲು : ಗೂಡ್ಸ್ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ್ಯು - Karavali Times

728x90

14 November 2023

ಬ್ರಹ್ಮರಕೂಟ್ಲು : ಗೂಡ್ಸ್ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ್ಯು

ಬಂಟ್ವಾಳ, ನವೆಂಬರ್ 15, 2023 (ಕರಾವಳಿ ಟೈಮ್ಸ್) : ಗೂಡ್ಸ್ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಮೃತ ದ್ವಿಚಕ್ರ ವಾಹನ ಸವಾರನನ್ನು ಪ್ರತೀಕ್ಷಾ ಪೂಜಾರಿ ಎಂದು ಹೆಸರಿಸಲಾಗಿದೆ. ಕನಕರಾಜ್ ಎಂಬವರು ಚಲಾಯಿಸುತ್ತಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ದೂರಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬ್ರಹ್ಮರಕೂಟ್ಲು : ಗೂಡ್ಸ್ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ್ಯು Rating: 5 Reviewed By: karavali Times
Scroll to Top