ಬಂಟ್ವಾಳ, ನವೆಂಬರ್ 09, 2023 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಬಿ ಮೂಡ ಗ್ರಾಮದ ತಲಪಾಡಿ ಎಂಬಲ್ಲಿ ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರರನ್ನು ಅಮ್ಮುಂಜೆ ಗ್ರಾಮದ ನಿವಾಸಿಗಳಾದ ರವೀಂದ್ರ ಹಾಗೂ ಶೇಖರ್ ಎಂದು ಹೆಸರಿಸಲಾಗಿದೆ. ರವೀಂದ್ರ ಅವರು ಬುಧವಾರ ಸಂಜೆ ಬೈಕಿನಲ್ಲಿ ತನ್ನ ಅಣ್ಣ ಶೇಖರ ಅವರನ್ನು ಸಹಸವಾರನಾಗಿ ಕುಳ್ಳಿರಿಸಿಕೊಂಡು ತೆರಳುತ್ತಿದ್ದ ವೇಳೆ ತಲಪಾಡಿ ಎಂಬಲ್ಲಿ ಶ್ರೀನಿವಾಸ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಅಪಘಾತದ ತೀವ್ರತಗೆ ಬೈಕ್ ಸವಾರರ ಸಹಿತ ರಸ್ತೆಗೆ ಬಿದ್ದಿದ್ದು, ಈ ಸಂದರ್ಭ ಸವಾರರಿಬ್ಬರು ಗಾಯಗೊಂಡಿದ್ದಾರೆ. ಸವಾರ ರವೀಂದ್ರ ಅವರು ತುಂಬೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡರೆ, ಸಹಸವಾರ ಶೇಖರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment