ಬೆಳ್ತಂಗಡಿ, ಡಿಸೆಂಬರ್ 16, 2023 (ಕರಾವಳಿ ಟೈಮ್ಸ್) : ತಾಲೂಕಿನ ಬೆಳಾಲು ಗ್ರಾಮದ ಕಲ್ಲಾಪು ಎಂಬಲ್ಲಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣ ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಇಲ್ಲಿನ ನಿವಾಸಿ ಭಾಸ್ಕರ ಗೌಡ ಅವರು ಅಂಗಡಿಯೊಂದರ ಹಿಂಭಾಗದಲ್ಲಿ ಪರವಾನಿಗೆ ರಹಿತವಾಗಿ ಅಕ್ರಮ ಅಮಲು ಪದಾರ್ಥ ಶೇಖರಿಸಿಟ್ಟು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಧರ್ಮಸ್ಥಳ ಪೊಲೀಸ್ ಠಾಣಾ ಎಸ್ಸೈ ಅನಿಲ್ ಕುಮಾರ್ ನೇತೃತ್ವದ ಪೊಲೀಸರು ಈ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಆರೋಪಿ ಭಾಸ್ಕರ ಗೌಡ ಪರಾರಿಯಾಗಿದ್ದು, ಸ್ಥಳದಲ್ಲಿದ್ದ ಸುಮಾರು 1,680/- ರೂಪಾಯಿ ಮೌಲ್ಯದ 3.7 ಲೀಟರ್ ತೂಕದ 42 ಮದ್ಯದ ಸ್ಯಾಚೆಟ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment