ಬಿಜೆಪಿ ಸರಕಾರದ ಅವಧಿಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹೇರಲಾಗಿದ್ದ ಹಿಜಾಬ್ ನಿಷೇಧ ಹಿಂಪಡೆಯಲು ಸೂಚನೆ ನೀಡಿದ್ದೇನೆ : ಸಿಎಂ ಸಿದ್ದರಾಮಯ್ಯ - Karavali Times ಬಿಜೆಪಿ ಸರಕಾರದ ಅವಧಿಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹೇರಲಾಗಿದ್ದ ಹಿಜಾಬ್ ನಿಷೇಧ ಹಿಂಪಡೆಯಲು ಸೂಚನೆ ನೀಡಿದ್ದೇನೆ : ಸಿಎಂ ಸಿದ್ದರಾಮಯ್ಯ - Karavali Times

728x90

22 December 2023

ಬಿಜೆಪಿ ಸರಕಾರದ ಅವಧಿಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹೇರಲಾಗಿದ್ದ ಹಿಜಾಬ್ ನಿಷೇಧ ಹಿಂಪಡೆಯಲು ಸೂಚನೆ ನೀಡಿದ್ದೇನೆ : ಸಿಎಂ ಸಿದ್ದರಾಮಯ್ಯ

ಉಡುಪು-ಊಟ ನಿಮ್ಮ ಹಕ್ಕು, ಅದಕ್ಕೆ ಅಡ್ಡಿ ಪಡಿಸುವುದಿಲ್ಲ, ಮತಕ್ಕಾಗಿ ರಾಜಕಾರಣವೂ ಇಲ್ಲ 


ಬಡವರಿಗಾಗಿ ನಮ್ಮ ಸರಕಾರ ಕೆಲಸ ಮಾಡಲಿದೆ, ಇದರಿಂದ ವಿಚಲಿತರಾಗುವುದಿಲ್ಲ, ಅದರಲ್ಲಿ ರಾಜಿ ಮಾಡುವ ಪ್ರಶ್ನೆಯೇ ಇಲ್ಲ


ಮೈಸೂರು, ಡಿಸೆಂಬರ್ 23, 2023 (ಕರಾವಳಿ ಟೈಮ್ಸ್) : ಬಿಜೆಪಿ ಸರಕಾರದ ಅವಧಿಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹೇರಲಾಗಿದ್ದ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಶುಕ್ರವಾರ ಮಾತನಾಡಿದ ಅವರು, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಘೋಷಿಸಿದರು. 

ಎಲ್ಲರೂ ಹಿಜಾಬ್ ಧರಿಸಿ ಹೋಗಬಹುದು. ಆದೇಶ ಹಿಂಪಡೆಯಲು ಸೂಚಿಸಿದ್ದೇನೆ. ಉಡುಪು, ಊಟ ಮಾಡುವುದು ನಿಮ್ಮ ಆಯ್ಕೆ. ಅದಕ್ಕೆ ನಾವು ಅಡ್ಡಿಪಡಿಸುವುದಿಲ್ಲ. ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರಕಾರ ಕೆಲಸ ಮಾಡುತ್ತದೆ. ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಹೋಗಬೇಡಿ ಎಂದ ಸಿಎಂ ಸಿದ್ದರಾಮಯ್ಯ ಈ ಮೂಲಕ ಕಾಂಗ್ರೆಸ್ ಸರಕಾರವು ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಶೈಕ್ಷಣಿಕ ಸಂಸ್ಥೆಗಳಲ್ಲಿ ತಂದಿದ್ದ ಹಿಜಾಬ್ ನಿಷೇಧವನ್ನು ತೆರವು ಮಾಡುತ್ತಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿ ತೆರಳಲು ಅವಕಾಶ ನೀಡಿದೆ ಎಂದಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಿಜೆಪಿ ಸರಕಾರದ ಅವಧಿಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹೇರಲಾಗಿದ್ದ ಹಿಜಾಬ್ ನಿಷೇಧ ಹಿಂಪಡೆಯಲು ಸೂಚನೆ ನೀಡಿದ್ದೇನೆ : ಸಿಎಂ ಸಿದ್ದರಾಮಯ್ಯ Rating: 5 Reviewed By: karavali Times
Scroll to Top