ಬಂಟ್ವಾಳ, ಡಿಸೆಂಬರ್ 07, 2023 (ಕರಾವಳಿ ಟೈಮ್ಸ್) : ಖಾಸಗಿ ಬಸ್ಸು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಬಳಿ ಬುಧವಾರ ಸಂಜೆ ನಡೆದಿದೆ.
ಮೃತ ಸ್ಕೂಟರ್ ಸವಾರನನ್ನು ನಾರಾಯಣ ಎಂದು ಹೆಸರಿಸಲಾಗಿದೆ. ಬುಧವಾರ ಸಂಜೆ ಪಲ್ಲಮಜಲು ಕ್ರಾಸ್ ಬಳಿ ಮುನೀರ್ ಎಂಬವರು ಚಲಾಯಿಸುತ್ತಿದ್ದ ರಾಜ ಲಕ್ಷ್ಮಿ ಖಾಸಗಿ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸಮೇತ ಚಾಲಕ ನಾರಾಯಣ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಅವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ನಾರಾಯಣ ಅವರು ರಾತ್ರಿ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಗೆ ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ದುಡುಕುತನವೇ ಕಾರಣವೆನ್ನಲಾಗಿದ್ದು, ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment