2024ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ - Karavali Times 2024ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ - Karavali Times

728x90

1 December 2023

2024ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಮಾರ್ಚ್ 2 ರಿಂದ 22ರವರೆಗೆ ಪಿಯುಸಿ ಹಾಗೂ ಮಾರ್ಚ್ 25 ರಿಂದ ಎಪ್ರಿಲ್ 6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ


ಡಿಸೆಂಬರ್ 15ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ


ಬೆಂಗಳೂರು, ಡಿಸೆಂಬರ್ 30, 2023 (ಕರಾವಳಿ ಟೈಮ್ಸ್) : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.

ಪರೀಕ್ಷಾ ಮಂಡಳಿಯ ವೆಬ್ ಸೈಟಿನಲ್ಲಿ ಶುಕ್ರವಾರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು, ಪೆÇೀಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 15ರವರೆಗೆ ಕಾಲಾವಕಾಶ ನೀಡಲಾಗಿದೆ.

ಈಗಾಗಲೇ ಪ್ರಕಟಗೊಂಡಿರುವ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಗಳು 2024 ರ ಮಾರ್ಚ್ 25 ರಿಂದ ಎಪ್ರಿಲ್ 6 ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 2 ರಿಂದ 22 ರವರೆಗೆ ನಡೆಯಲಿದೆ. 


ಎಸ್ಸೆಸ್ಸೆಲ್ಸಿ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ


ಮಾರ್ಚ್ 25 ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎಸ್ ಸಿ ಇ ಆರ್ ಟಿ), ಸಂಸ್ಕೃತ, ಮಾರ್ಚ್ 27 ರಂದು ಸಮಾಜ ವಿಜ್ಞಾನ, ಮಾರ್ಚ್ 30 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಎಪ್ರಿಲ್ 2 ರಂದು ಗಣಿತ, ಸಮಾಜ ಶಾಸ್ತ್ರ, 

ಎಪ್ರಿಲ್ 3 ರಂದು ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-4, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2 ಪರೀಕ್ಷೆಗಳು ನಡೆಯಲಿವೆ. ಎಪ್ರಿಲ್ 4ರಂದು ತೃತೀಯ ಭಾಷೆ ಹಿಂದಿ,  ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್ ಎಸ್ ಕ್ಯೂ ಎಫ್ ವಿಷಯಗಳಾದ (ಮಾಹಿತಿ ತಂತ್ರಜ್ಞಾನ, ರಿಟೇಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‍ನೆಸ್, ಅಪರೆಲ್ಸ್ ಮೇಡ್ ಆಪ್ಸ್ & ಹೋಮ್ ಫರ್ನಿಶಿಂಗ್ ಎಲೆಕ್ಟ್ರಾನಿಕ್ಸ್ & ಹಾರ್ಡ್ ವೇರ್), ಎಪ್ರಿಲ್ 6 ರಂದು ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ) ಪರೀಕ್ಷೆಗಳು ನಡೆಯಲಿವೆ.


ದ್ವಿತೀಯ ತಾತ್ಕಾಲಿಕ ಪಿಯುಸಿ ವೇಳಾ ಪಟ್ಟಿ 


ಮಾರ್ಚ್ 2 ರಂದು ಕನ್ನಡ, ಅರೇಬಿಕ್, ಮಾರ್ಚ್ 4 ರಂದು ಇತಿಹಾಸ, ಭೌತಶಾಸ್ತ್ರ, ಮಾರ್ಚ್ 5 ರಂದು ಮಾಹಿತಿ ತಂತ್ರಜ್ಞಾನ, ರಿಟೈಲ್, ಅಟೋಮೊಬೈಲ್, ಹೆಲ್ತ್‍ಕೇರ್, ಬ್ಯೂಟಿ ಅಂಡ್ ವೆಲ್ನೆಸ್, ಮಾರ್ಚ್ 6 ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ, ಮಾರ್ಚ್ 7 ರಂದು ಹಿಂದಿ, ಮಾರ್ಚ್ 9 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾರ್ಚ್ 11 ರಂದು ಇಂಗ್ಲೀಷ್, ಮಾರ್ಚ್ 12 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಾರ್ಚ್ 13 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾರ್ಚ್ 14 ರಂದು ಗಣಿತ, ಶಿಕ್ಷಣ ಶಾಸ್ತ್ರ ಪರೀಕ್ಷೆ, ಮಾರ್ಚ್ 16 ರಂದು ಭೌಗೋಳ ಶಾಸ್ತ್ರ, ಜೀವ ಶಾಸ್ತ್ರ, ಮಾರ್ಚ್ 18 ರಂದು ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ಕೆಮಿಸ್ಟ್ರಿ, ಮೂಲ ಗಣಿತ, ಮಾರ್ಚ್ 20 ರಂದು ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಭೂವಿಜ್ಞಾನ, ಗೃಹ ವಿಜ್ಞಾನ ಹಾಗೂ ಮಾರ್ಚ್ 22 ರಂದು ಅರ್ಥಶಾಸ್ತ್ರ ಪರೀಕ್ಷೆಗಳು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: 2024ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Rating: 5 Reviewed By: karavali Times
Scroll to Top