ಬಂಟ್ವಾಳ, ಡಿಸೆಂಬರ್ 23, 2023 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಸಜಿಪನಡು ಎಂಬಲ್ಲಿ ಗುರುವಾರ ನಡೆದಿದೆ.
ಗಾಯಾಳು ಸ್ಕೂಟರ್ ಸವಾರರನ್ನು ಬೋಳಿಯಾರು ನಿವಾಸಿ ಅಶ್ರಫ್ (41) ಹಾಗೂ ನವಾಜ್ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ನವಾಜ್ ಸವಾರರಾಗಿ ಹಾಗೂ ಅಶ್ರಫ್ ಸಹಸವಾರರಾಗಿ ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ವೇಳೆ ಸಜಿಪನಡು ಎಂಬಲ್ಲಿ ಅಬ್ದುಲ್ ರಹಿಮಾನ್ ಎಂಬವರು ಚಲಾಯಿಸುತ್ತಿದ್ದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಸ್ಕೂಟರ್ ಸವಾರರಿಬ್ಬರು ಕೂಡಾ ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ಸಾಗಿಸಲಾಗಿದೆ. ಅಟೋ ರಿಕ್ಷಾ ಚಾಲಕನ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯ ಚಾಲನೆಯೇ ಘಟನೆಗೆ ಕಾರಣ ಎಂದು ಅಶ್ರಫ್ ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment