ಸೈಕಲ್ ಮಾರಾಟದ ವಿಚಾರದಲ್ಲಿ ತಾಯಿ ಎದುರಲ್ಲೇ ಶಾಲಾ ಬಾಲಕಗೆ ಹಲ್ಲೆ ನಡೆಸಿದ ಎಸ್.ಡಿ.ಎಂ.ಸಿ. ಅಧ್ಯಕ್ಷ : ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಸೈಕಲ್ ಮಾರಾಟದ ವಿಚಾರದಲ್ಲಿ ತಾಯಿ ಎದುರಲ್ಲೇ ಶಾಲಾ ಬಾಲಕಗೆ ಹಲ್ಲೆ ನಡೆಸಿದ ಎಸ್.ಡಿ.ಎಂ.ಸಿ. ಅಧ್ಯಕ್ಷ : ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

2 December 2023

ಸೈಕಲ್ ಮಾರಾಟದ ವಿಚಾರದಲ್ಲಿ ತಾಯಿ ಎದುರಲ್ಲೇ ಶಾಲಾ ಬಾಲಕಗೆ ಹಲ್ಲೆ ನಡೆಸಿದ ಎಸ್.ಡಿ.ಎಂ.ಸಿ. ಅಧ್ಯಕ್ಷ : ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ, ಡಿಸೆಂಬರ್ 02, 2023 (ಕರಾವಳಿ ಟೈಮ್ಸ್) : ಪ್ರಾಥಮಿಕ ಶಾಲಾ ಬಾಲಕ ಸೈಕಲ್ ಮಾರಾಟ ಮಾಡಿದ್ದಾನೆ ಎಂದು ಆರೋಪಿಸಿ ಶಾಲೆಗೆ ಕರೆದು ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವಿದ್ಯಾರ್ಥಿಯ ತಾಯಿಯ ಸಮ್ಮುಖದಲ್ಲೇ ಹಲ್ಲೆ ನಡೆಸಿದ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂತ್ರಸ್ತ ಬಾಲಕ ಪೂಂಜಾಲಕಟ್ಟೆ ಪೆÇಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿದ್ದು, ಬಾಲಕನು ಆತನ ಬಾಬ್ತು ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ, ನ 28 ರಂದು ಬೆಳಿಗ್ಗೆ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಆರೋಪಿತ ಪರಮೇಶ ಎಂಬವರು ಬಾಲಕನನ್ನು ವಿಚಾರಿಸಿ ಬಾಲಕನ ತಾಯಿಯ ಸಮಕ್ಷಮದಲ್ಲಿ ಬಾಲಕನಿಗೆ ಸಣ್ಣ ದೊಣ್ಣೆಯಿಂದ ಹಾಗೂ ಕೈಯಿಂದ ಹೊಡೆದಿರುತ್ತಾರೆ. ಈ ವೇಳೆ ಶಾಲಾ ಶಿಕ್ಷಕರಾದ  ಪ್ರಮೀಳಾ ಮತ್ತು ರಮೇಶ್ ಎಂಬವರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿರುತ್ತಾರೆ. ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೇ  ಸೈಕಲ್ ಕದ್ದು ಮಾರಾಟ ಮಾಡಿದ ಬಗ್ಗೆ  ಕೇಸು ಹಾಕುವುದಾಗಿ ಬೆದರಿಕೆ ಹಾಕಿರುತ್ತಾರೆ ಎಂದು ಆರೋಪಿಸಲಾಗಿದೆ. 

ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ 30 ರಂದು ಬೆಳಿಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು  ಕಾಣಿಸಿಕೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಂತ್ರಸ್ತ ಬಾಲಕ ನೀಡಿದ ದೂರಿನಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕಲಂ 323, 324, 506, 114 ಜೊತೆಗೆ 34 ಐಪಿಸಿ ಮತ್ತು ಕಲಂ 75 ಬಾಲನ್ಯಾಯ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸೈಕಲ್ ಮಾರಾಟದ ವಿಚಾರದಲ್ಲಿ ತಾಯಿ ಎದುರಲ್ಲೇ ಶಾಲಾ ಬಾಲಕಗೆ ಹಲ್ಲೆ ನಡೆಸಿದ ಎಸ್.ಡಿ.ಎಂ.ಸಿ. ಅಧ್ಯಕ್ಷ : ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top