ಬಂಟ್ವಾಳ, ಡಿಸೆಂಬರ್ 10, 2023 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ಅಂಗನವಾಡಿ ಕೇಂದ್ರದ ಶಿಕ್ಷಕಿ, ಇಲ್ಲಿನ ಉಪ್ಪುಗುಡ್ಡೆ ನಿವಾಸಿ ಶ್ರೀಮತಿ ಪ್ರೇಮಾ ಟೀಚರ್ (52) ಹಠಾತ್ ಅನಾರೋಗ್ಯದಿಂದ ಶನಿವಾರ (ಡಿ 9) ಮಧ್ಯರಾತ್ರಿ ವೇಳೆಗೆ ನಿಧನರಾಗಿದ್ದಾರೆ.
ಶನಿವಾರ ರಾತ್ರಿ ಅವರಿಗೆ ಹಠಾತ್ ಆಗಿ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಪತಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಭಾನುವಾರ ಮಧ್ಯಾಹ್ನದ ವೇಳೆಗೆ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಅಂಗನವಾಡಿ ಶಿಕ್ಷಕಿ ಪ್ರೇಮಾ ಟೀಚರ್ ಅವರ ಹಠಾತ್ ನಿಧನಕ್ಕೆ ಸ್ಥಳೀಯ ಕೌನ್ಸಿಲರ್ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ ಸಹಿತ ಹಲವು ಮಂದಿ ದಿಗ್ಭ್ರಮೆ ಹಾಗೂ ತೀವ್ರ ಸಂತಾಪ ಸೂಚಿಸಿದ್ದಾರೆ.
0 comments:
Post a Comment