ನಾವು ವಚನ ಭ್ರಷ್ಟರಲ್ಲ, ವಚನ ಪಾಲಕರು, ಐದೂ ಗ್ಯಾರಂಟಿಗಳನ್ನು ಮಾತಿಗೆ ತಪ್ಪದೆ ಜಾರಿ ಮಾಡಿದ್ದೇವೆ, ದುರುಪಯೋಗ ಆಗದಂತೆ ಸದ್ಬಳಕೆ ಮಾಡಿಕೊಳ್ಳಿ : ಜನತೆಗೆ ಸಿಎಂ ಸಲಹೆ - Karavali Times ನಾವು ವಚನ ಭ್ರಷ್ಟರಲ್ಲ, ವಚನ ಪಾಲಕರು, ಐದೂ ಗ್ಯಾರಂಟಿಗಳನ್ನು ಮಾತಿಗೆ ತಪ್ಪದೆ ಜಾರಿ ಮಾಡಿದ್ದೇವೆ, ದುರುಪಯೋಗ ಆಗದಂತೆ ಸದ್ಬಳಕೆ ಮಾಡಿಕೊಳ್ಳಿ : ಜನತೆಗೆ ಸಿಎಂ ಸಲಹೆ - Karavali Times

728x90

12 January 2024

ನಾವು ವಚನ ಭ್ರಷ್ಟರಲ್ಲ, ವಚನ ಪಾಲಕರು, ಐದೂ ಗ್ಯಾರಂಟಿಗಳನ್ನು ಮಾತಿಗೆ ತಪ್ಪದೆ ಜಾರಿ ಮಾಡಿದ್ದೇವೆ, ದುರುಪಯೋಗ ಆಗದಂತೆ ಸದ್ಬಳಕೆ ಮಾಡಿಕೊಳ್ಳಿ : ಜನತೆಗೆ ಸಿಎಂ ಸಲಹೆ

ಬೆಂಗಳೂರು, ಜನವರಿ 13, 2024 (ಕರಾವಳಿ ಟೈಮ್ಸ್) : ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು. ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ  ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. 

ಸರಕಾರದ 5ನೇ ಗ್ಯಾರಂಟಿಯಾಗಿರುವ “ಯುವನಿಧಿ” ಯೋಜನೆಯನ್ನು ಜಾರಿಗೊಳಿಸಿದ ಬಳಿಕ ಪ್ರತಿಕ್ರಯಿಸಿರುವ ಅವರು, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರಕಾರದ ಕರ್ತವ್ಯ. ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಿಮ್ಮೆಲ್ಲರ ಕರ್ತವ್ಯ ಎಂದು ಸಲಹೆ ನೀಡಿದ್ದಾರೆ. 

ನಿಮ್ಮದೇ ತೆರಿಗೆ ಹಣ, ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು, ಇವು ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ. ಗ್ಯಾರಂಟಿಗಳ ಪ್ರತಿ ಪೈಸೆಯೂ ನಿಮ್ಮ ಬದುಕಿಗೆ ಸದುಪಯೋಗವಾಗಬೇಕು. ಚುನಾವಣಾ ಪ್ರಣಾಳಿಕೆಯನ್ನು 

ಚುನಾವಣಾ ಪ್ರಚಾರಕ್ಕೆ ಸೀಮಿತಗೊಳಿಸದೆ ಅದನ್ನು ಕಾರ್ಯರೂಪಕ್ಕೆ ತಂದು, ಜನರ ಬದುಕಲ್ಲಿ ಅವುಗಳ ಪ್ರತಿಫಲ ಕಾಣಬೇಕು ಎಂಬುದು ಆಶಯ ನಮ್ಮದು. ನಮ್ಮ ಸರಕಾರದ ಸದಾಶಯಕ್ಕೆ ತಮ್ಮೆಲ್ಲರ ಬೆಂಬಲವಿರಲಿ. ಗ್ಯಾರಂಟಿ ಗೆಲುವು, ಕರ್ನಾಟಕದ ಗೆಲುವು, ನಿಮ್ಮೆಲ್ಲರ ಗೆಲುವು ಆಗಲಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ನಾವು ವಚನ ಭ್ರಷ್ಟರಲ್ಲ, ವಚನ ಪಾಲಕರು, ಐದೂ ಗ್ಯಾರಂಟಿಗಳನ್ನು ಮಾತಿಗೆ ತಪ್ಪದೆ ಜಾರಿ ಮಾಡಿದ್ದೇವೆ, ದುರುಪಯೋಗ ಆಗದಂತೆ ಸದ್ಬಳಕೆ ಮಾಡಿಕೊಳ್ಳಿ : ಜನತೆಗೆ ಸಿಎಂ ಸಲಹೆ Rating: 5 Reviewed By: karavali Times
Scroll to Top