ರಾಮ ಮಂದಿರ ಪ್ರತಿಷ್ಠಾಪನೆ ಹಿನ್ನಲೆ : ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸರಿಗೆ ಸೂಚನೆ : ಸಿಎಂ ಸಿದ್ದರಾಮಯ್ಯ - Karavali Times ರಾಮ ಮಂದಿರ ಪ್ರತಿಷ್ಠಾಪನೆ ಹಿನ್ನಲೆ : ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸರಿಗೆ ಸೂಚನೆ : ಸಿಎಂ ಸಿದ್ದರಾಮಯ್ಯ - Karavali Times

728x90

20 January 2024

ರಾಮ ಮಂದಿರ ಪ್ರತಿಷ್ಠಾಪನೆ ಹಿನ್ನಲೆ : ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸರಿಗೆ ಸೂಚನೆ : ಸಿಎಂ ಸಿದ್ದರಾಮಯ್ಯ

 ಬೆಂಗಳೂರು, ಜನವರಿ 21, 2024 (ಕರಾವಳಿ ಟೈಮ್ಸ್) : ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಮಮಂದಿರ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನಲೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡ ಅವರು, ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕ ಪ್ರಸಂಗತನವನ್ನು ಮಾಡಬಾರದು ಎಂದು ತಾಕೀತು ಮಾಡಿದ್ದಾರೆ.

ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ ಎಂದು ಎಚ್ಚರಿಸಿದ ಸಿಎಂ ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರಕಾರ ಗಮನಿಸಿದೆ. ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರಕಾರದ ಕೆಲಸ ಸುಲಭವಾಗುತ್ತದೆ ಎಂದು ಕಟಕಿಯಾಡಿದ್ದಾರೆ.

ದೇವರು - ಧರ್ಮ - ಪೂಜೆ - ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು - ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ರಾಮ ಮಂದಿರ ಪ್ರತಿಷ್ಠಾಪನೆ ಹಿನ್ನಲೆ : ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸರಿಗೆ ಸೂಚನೆ : ಸಿಎಂ ಸಿದ್ದರಾಮಯ್ಯ Rating: 5 Reviewed By: lk
Scroll to Top