ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ - Karavali Times ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ - Karavali Times

728x90

10 January 2024

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜನವರಿ 11, 2024 (ಕರಾವಳಿ ಟೈಮ್ಸ್) : ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ  ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಸಿಎಂ ಸಿದ್ದರಾಮ್ಯಯ ಘೋಷಿಸಿದ್ದಾರೆ. 

ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯ ಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು ಎಂದಿರುವ ಸಿದ್ದರಾಮಯ್ಯ ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂಪಾಯಿಗಳನ್ನು ಪ್ರತಿ ತಿಂಗಳು ನೀಡಲಾಗುವುದು. 

ಒಟ್ಟು 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ  ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದಿದ್ದಾರೆ. 

ಸರಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂಪಾಯಿಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ Rating: 5 Reviewed By: karavali Times
Scroll to Top