ಹಝ್ರತ್ ಶೈಖ್ ಮೌಲವಿ ಅವರ 43ನೇ ವರ್ಷದ ಉರೂಸ್ ಕಾರ್ಯಕ್ರಮದ 2ನೇ ದಿನ
ಬಂಟ್ವಾಳ, ಜನವರಿ 04, 2024 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ಮೆಲ್ಕಾರ್-ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿ ಸಮೀಪ ಅಂತ್ಯವಿಶ್ರಮಗೊಳ್ಳುತ್ತಿರುವ ಹಝ್ರತ್ ಶೈಖ್ ಮೌಲವಿ (ಖಸಿ) ಅವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ 43ನೇ ವರ್ಷದ ಉರೂಸ್ ಕಾರ್ಯಕ್ರಮದ 2ನೇ ದಿನವಾದ ಇಂದು ಜನವರಿ 4 ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಮಗ್ರಿಬ್ ನಮಾಝ್ ಬಳಿಕ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ ನಡೆಯಲಿದೆ. ಸಯ್ಯಿದ್ ಅಕ್ರಂ ಅಲಿ ತಂಙಳ್ ಮಜ್ಲಿಸ್ ನೇತೃತ್ವ ವಹಿಸುವರು. ಮಾರಿಪಳ್ಳ ಜುಮಾ ಮಸೀದಿ ಖತೀಬ್ ಇಲ್ಯಾಸ್ ಅರ್ಶದಿ ಮುಖ್ಯ ಭಾಷಣಗೈಯುವರು.
ಮಸೀದಿ ಖತೀಬ್ ಕೆ ಪಿ ಹಸ್ವೀಫ್ ದಾರಿಮಿ ಕಾಜಿನಡ್ಕ, ಮಸೀದಿ ಗೌರವಾಧ್ಯಕ್ಷ ಹಾಜಿ ಬಿ ಎ ಮುಹಮ್ಮದ್ ನೀಮಾ, ಮಸೀದಿ ಅಧ್ಯಕ್ಷ ಅಬೂಬಕ್ಕರ್ ಮೆಲ್ಕಾರ್, ಕಾರ್ಯದರ್ಶಿ ಮುಹಮ್ಮದ್ ಹನೀಫ್ ಎಸ್.ಎಂ. ನಗರ, ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಮೊದಲಾದವರು ಭಾಗವಹಿಸುವರು.
ಮದ್ರಸ ಅಧ್ಯಾಪಕರಾದ ಉಸ್ಮಾನ್ ಮುಸ್ಲಿಯಾರ್, ಇಸ್ಮಾಯಿಲ್ ಮುಸ್ಲಿಯಾರ್, ಬಾವಾ ಮುಸ್ಲಿಯಾರ್, ಅಬ್ದುಲ್ ನಾಸಿರ್ ಅಲ್-ಮದನಿ, ರಶೀದ್ ಹನೀಫಿ ಮೊದಲಾದವರು ಉಪಸ್ಥಿತರಿರುವರು ಎಂದು ಮಸೀದಿ ಅಧ್ಯಕ್ಷ ಅಬೂಬಕ್ಕರ್ ಮೆಲ್ಕಾರ್ ತಿಳಿಸಿದ್ದಾರೆ.
0 comments:
Post a Comment