ಬಂಟ್ವಾಳ, ಜನವರಿ 05, 2024 (ಕರಾವಳಿ ಟೈಮ್ಸ್) : ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಬಿ ರಮನಾಥ ರೈ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಪಕ್ಷ ಸಂಘಟನೆ, ಮುಂಬರುವ ಲೋಕಸಭಾ ಚುನಾವಣಾ ತಯಾರಿ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.
ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ದಿಗೆ ಹಲವಾರು ಕೊಡುಗೆಗಳನ್ನು ನೀಡಿರುವ ಮಾಜಿ ಸಚಿವ ರಮಾನಾಥ ರೈ ಅವರಿಗೆ ಮಂಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಬೇಕು ಅಥವಾ ಎಂ ಎಲ್ ಸಿ ಮಾಡಿ ಸಚಿವಗಿರಿ ನೀಡುವ ಮೂಲಕ ಮಹತ್ವದ ರಾಜಕೀಯ ಸ್ಥಾನಮಾನ ನೀಡಿ ಜಿಲ್ಲೆಯ ಅಭಿವೃದ್ದಿಗೆ ಇನ್ನಷ್ಟು ಅವಕಾಶ ನೀಡಬೇಕು ಎಂದು ಜಿಲ್ಲೆಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಪ್ರತ್ಯೇಕ ಮನವಿಗಳನ್ನು ನೀಡಿ ಒತ್ತಾಯಪಡಿಸಿರುವ ಮಧ್ಯೆ ರೈ ಅವರ ಈ ದೆಹಲಿ ಭೇಟಿ ಇದೀಗ ಮಹತ್ವ ಪಡೆದಿದ್ದು, ಜಿಲ್ಲೆಯಲ್ಲಿ ವಿವಿಧ ಚರ್ಚೆಗಳನ್ನು ಹುಟ್ಟುಹಾಕಿದೆ.
0 comments:
Post a Comment