ಬಂಟ್ವಾಳ, ಜನವರಿ 20, 2024 (ಕರಾವಳಿ ಟೈಮ್ಸ್) : ಉದ್ಯಮದೊಂದಿಗೆ ಸಮಾಜ ಸೇವೆಯನ್ನೂ ಮಾಡುವ ಮೂಲಕ ಜನಾನುರಾಗಿಯಾಗಿರುವ ಬೋಳಂಗಡಿ ನಿವಾಸಿ ಮುಸ್ತಫಾ ಎಂ.ಎಚ್. ಅವರ ಮಾಲಕತ್ವದ MHM ಹಾಟ್ ಚಿಪ್ಸ್ ಮತ್ತು ಬೇಕರಿ ಐಟಮ್ಸ್ ಮಳಿಗೆಯು ಸಜಿಪ-ದೇರಾಜೆಯಲ್ಲಿ ಜನವರಿ 21 ರಂದು ಭಾನುವಾರ (ನಾಳೆ) ಬೆಳಿಗ್ಗೆ 9 ಗಂಟೆಗೆ ಶುಭಾರಂಭಗೊಳ್ಳಲಿದೆ.
ಬೋಳಂಗಡಿ ಹವ್ವಾ ಜುಮಾ ಮಸೀದಿ ಖತೀಬ್ ಮೌಲಾನಾ ಯಹ್ಯಾ ತಂಙಳ್ ಮದನಿ ದುವಾಶೀರ್ವಚನ ಮೂಲಕ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ.
ಶುಭಾರಂಭ ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್, ಮಾಜಿ ಸಚಿವ ಬಿ ರಮಾನಾಥ ರೈ, ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್, ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸಂತೋಷ್ ಕುಮಾರ್ ರೈ ಬೋಳಿಯಾರು ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕ ಮುಸ್ತಫಾ ಎಂ ಎಚ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment