ಸುಳ್ಯ, ಜನವರಿ 07, 2024 (ಕರಾವಳಿ ಟೈಮ್ಸ್) : ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಬ್ಯಾನರ್ ವಿರೂಪಗೊಳಿಸಿದ ಪ್ರಕರಣ ಬೇಧಿಸಿದ ಪೊಲೀಸರು ಸ್ಥಳೀಯವಾಗಿ ಎದ್ದಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಅಳವಡಿಸಿದ್ದ ಬ್ಯಾನರ್ ಮಧ್ಯ ಬಾಗವನ್ನು, ಯಾರೋ ಹರಿದು ತೆಗೆದುಕೊಂಡು ಹೋಗಿರುವ ಬಗ್ಗೆ, ಆಟೊ ರಿಕ್ಷಾ ಸಂಘದ ಅದ್ಯಕ್ಷರು ಸುಳ್ಯ ಪೆÇಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದರು.
ಈ ಬಗ್ಗೆ ತನಿಖೆ ಕೈಗೊಂಡ ಸುಳ್ಯ ಪೊಲೀಸರು ಸುಳ್ಯದಲ್ಲಿರುವ ಸುಮಾರು 40 ಸಿಸಿ ಕ್ಯಾಮಾರಗಳ ಪೂಟೇಜ್‍ಗಳನ್ನು ಪರಿಶೀಲನೆ ನಡೆಸಿದಾಗ ಜ 5 ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡು ಬರುತ್ತಿರುವ ಅಪರಿಚಿತ ವಯಸ್ಸಾದ ವ್ಯಕ್ತಿಯೋರ್ವ, ಸದರಿ ಬ್ಯಾನರ್ ಹರಿದು ತನ್ನ ಕೈಯಲ್ಲಿ ಹಿಡಿದುಕೊಂಡು, ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ಕಂಡು ಬಂದಿದೆ. ಬಳಿಕ ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಹರಿದ ಬ್ಯಾನರ್ ತುಂಡನ್ನು ಇಟ್ಟು ರಾಮನ ಜಪ ಮಾಡಿದ್ದನ್ನು ಸಾರ್ವಜನಿಕರು ನೋಡಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ ಎನ್ನಲಾಗಿದೆ. ಹರಿದ ಬ್ಯಾನರ್ ತುಂಡನ್ನು ಪರಿಶೀಲಿಸಲಾಗಿ ಅಯೋಧ್ಯೆಯ ಪೆÇೀಟೋಗಾಗಲಿ ಹಾಗೂ ಶ್ರೀರಾಮನ ಪೆÇೀಟೋಗಾಗಲಿ ಯಾವುದೇ ರೀತಿಯ ಹಾನಿಯಾಗಿರುವುದು ಕಂಡು ಬಂದಿರುವುದಿಲ್ಲ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment