ಬಂಟ್ವಾಳ, ಜನವರಿ 27, 2024 (ಕರಾವಳಿ ಟೈಮ್ಸ್) : ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ಚಾಲಕ, ಮರಳು ಸಹಿತ ಲಾರಿಯನ್ನು ವಶಪಡಿಸಿಕೊಂಡು ಘಟನೆ ತೆಂಕಬೆಳ್ಳೂರು ಗ್ರಾಮದ ಧನುಪೂಜೆ-ಮುಡಾಯಿಕೋಡಿ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಮುಡಾಯಿಕೋಡಿ ಎಂಬಲ್ಲಿ ಲಾರಿಯನ್ನು ತಡೆದು ನಿಲ್ಲಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದಾಗ ಪರವಾನಿಗೆ ರಹಿತ ಮರಳು ಸಾಗಾಟ ಪ್ರಕರಣ ಪತ್ತೆಯಾಗಿದೆ. ಆರೋಪಿ ಲಾರಿ ಚಾಲಕ ರಾಝಿಕ್ ಎಂಬಾತ ಈ ಮರಳನ್ನು ಅಡ್ಡೂರು ಹೊಳೆಯಿಂದ ಕದ್ದು ಸಾಗಿಸುತ್ತಿರುವ ಬಗ್ಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ವಶಪಡಿಸಿಕೊಂಡ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 comments:
Post a Comment