ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಸಾವಿರಾರು ಮೌಲ್ಯದ ಗಾಂಜಾ ವಶಪಡಿಸಿಕೊಂಡ ಬೆಳ್ತಂಗಡಿ ಪೊಲೀಸರು - Karavali Times ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಸಾವಿರಾರು ಮೌಲ್ಯದ ಗಾಂಜಾ ವಶಪಡಿಸಿಕೊಂಡ ಬೆಳ್ತಂಗಡಿ ಪೊಲೀಸರು - Karavali Times

728x90

29 February 2024

ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಸಾವಿರಾರು ಮೌಲ್ಯದ ಗಾಂಜಾ ವಶಪಡಿಸಿಕೊಂಡ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ, ಫೆಬ್ರವರಿ 29, 2024 (ಕರಾವಳಿ ಟೈಮ್ಸ್) : ಸ್ಕೂಟಿಯಲ್ಲಿ ಸಾವಿರಾರು ರೂಪಾಯಿ ಮೌಲ್ಯದ ಗಾಂಜಾ ಹೊಂದಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಓಡುರೊಟ್ಟು ಎಂಬಲ್ಲಿ ಗುರುವಾರ ನಡೆದಿದೆ. 

ಬಂಧಿತ ಅರೋಪಿಗಳನ್ನು ಕಳಿಯಾ ಗ್ರಾಮದ ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮೂಂಡಜೆ ಗ್ರಾಮದ ಸೋಮಂತಡ್ಕ ನಿವಾಸಿ ಸತೀಶ್ ಅಲಿಯಾಸ್ ಸ್ಕಾರ್ಪಿಯೋ ಸತೀಶ್ ಎಂದು ಗುರುತಿಸಲಾಗಿದೆ. 

ಗುರುವಾರ ಬೆಳಿಗ್ಗೆ ಇಬ್ಬರು ಆರೋಪಿಗಳು ಓಡುರೊಟ್ಟು ಬಳಿ ಸ್ಕೂಟಿಯೊಂದಿಗೆ ಅನುಮಾನಾಸ್ಪದವಾಗಿ ನಿಂತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪಿಎಸ್ಸೈ ಚಂದ್ರಶೇಖರ ಅವರ ನೇತೃತ್ವದ ಪೊಲೀಸರು ತಪಾಸಣೆ ನಡೆಸಿದ ವೇಳೆ ಈ ಗಾಂಜಾ ಪ್ರಕರಣ ಬೆಳಕಿಗೆ ಬಂದಿದೆ. 

ಆರೋಪಿ ಉಮ್ಮರ್ ಫಾರೂಕ್ ಬಳಿ 50 ಸಾವಿರ ರೂಪಾಯಿ ಮೌಲ್ಯದ 2.10 ಕೆಜಿ ಗಾಂಜಾ ಹಾಗೂ ಸತೀಶ್ ಬಳಿ 1 ಸಾವಿರ ರೂಪಾಯಿ ಮೌಲ್ಯದ 55 ಗ್ರಾಂ ತೂಕದ ಗಾಂಜಾ ಪತ್ತೆಯಾಗಿರುತ್ತದೆ. ಸದ್ರಿ ಗಾಂಜಾ, ಕೃತ್ಯಕ್ಕೆ ಬಳಸಿದ ಸ್ಕೂಟರ್ ಸಹಿತ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಸಾವಿರಾರು ಮೌಲ್ಯದ ಗಾಂಜಾ ವಶಪಡಿಸಿಕೊಂಡ ಬೆಳ್ತಂಗಡಿ ಪೊಲೀಸರು Rating: 5 Reviewed By: karavali Times
Scroll to Top