ಎಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳು ಅವಧಿ ವಿಸ್ತರಿಸಿ ಘೋಷಣೆ ಮಾಡಿದ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ - Karavali Times ಎಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳು ಅವಧಿ ವಿಸ್ತರಿಸಿ ಘೋಷಣೆ ಮಾಡಿದ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ - Karavali Times

728x90

13 February 2024

ಎಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳು ಅವಧಿ ವಿಸ್ತರಿಸಿ ಘೋಷಣೆ ಮಾಡಿದ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು, ಫೆಬ್ರವರಿ 14, 2024 (ಕರಾವಳಿ ಟೈಮ್ಸ್) : ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡಲಾಗುವುದು ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ. 

ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ ಎಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಅಂದರೆ ರಾಜ್ಯದಲ್ಲಿ ಈವರೆಗೆ 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದೆ. ಹೀಗಾಗಿ 3 ತಿಂಗಳು ಅವಧಿ ವಿಸ್ತರಣೆ ಮಾಡಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಧು ಮಾದೇಗೌಡ ಪ್ರಶ್ನೆಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರಿಸಿದ್ದಾರೆ.

ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (ಎಚ್.ಎಸ್.ಆರ್.ಪಿ.) ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು ಮುಂದಾಗುತ್ತಿದ್ದು, ಅಪೆÇ್ಲೀಡ್ ಸಮಸ್ಯೆಯಾಗಲಿದೆ. ಈಗ ಪುನಃ ದಿನಾಂಕ ವಿಸ್ತರಣೆಗೆ ಒತ್ತಡ ಕೇಳಿ ಬಂದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದರು. ಅದರಂತೆ ಇದೀಗ 3 ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.

ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಮಾಡಿಸಲು ಫೆಬ್ರವರಿ 17 ಕೊನೆ ದಿನಾಂಕ ಎಂದು ಈ ಹಿಂದೆ ಘೋಷಿಸಲಾಗಿತ್ತು. ಆದರೆ ದಿನಾಂಕ ಮುಂದೂಡುವಂತೆ ಒತ್ತಡ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಮೂರು ತಿಂಗಳು ವಿಸ್ತರಿಸಲಾಗಿದೆ. 

ನಕಲಿ ನಂಬರ್ ಪ್ಲೇಟ್, ವಾಹನಗಳನ್ನು ಕಾನೂನು ಬಾಹಿರ ಚಟುವಟಿಕೆಗೆ ಬಳಕೆ ಮಾಡುವುದನ್ನು ತಪ್ಪಿಸಲು ಹಾಗೂ ವಾಹನಗಳನ್ನು ಟ್ರಾಕ್ ಮಾಡಲು ಸೇರಿದಂತೆ ಹಲವು ಕಾರಣಗಳಿಂದ  ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗುತ್ತಿದೆ. ಈ ನಂಬರ್ ಪ್ಲೇಟ್ ಎಲ್ಲೆಂದರಲ್ಲಿ ಸಿಗುವುದಿಲ್ಲ. ಮದ್ಯವರ್ತಿಗಳ ಅವಶ್ಯಕತೆ ಇಲ್ಲ. ಸುಲಭವಾಗಿ ನಂಬರ್ ಪ್ಲೇಟ್ ಪಡೆಯಲು ಸರ್ಕಾರ ಮಾರ್ಗಸೂಚಿ ಕೂಡಾ ಬಿಡುಗಡೆ ಮಾಡಿದೆ.

2019ರ ಎಪ್ರಿಲ್‍ಗೂ ಮೊದಲು ರಿಜಿಸ್ಟ್ರೇಶನ್ ಆಗಿರುವ ಎಲ್ಲಾ ವಾಹನಗಳಿಗೆ ಎಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಕಡ್ಡಾಯವಾಗಿದೆ. 2019ರ ಎಪ್ರಿಲ್ ಬಳಿಕ ರಿಜಿಸ್ಟ್ರೇಶನ್ ಆಗಿರುವ ವಾಹನಗಳಿಗೆ ಹಾಕಲಾಗಿರುವ ನಂಬರ್ ಪ್ಲೇಟ್ ಎಚ್.ಎಸ್.ಆರ್.ಪಿ. ಆಗಿದೆ. ಹೀಗಾಗಿ 2019 ರ ಎಪ್ರಿಲ್ ಮೊದಲು ರಿಜಿಸ್ಟ್ರೇಶನ್ ಆಗಿರುವ ವಾಹನಗಳ ಮಾಲೀಕರು ಎಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಎಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳು ಅವಧಿ ವಿಸ್ತರಿಸಿ ಘೋಷಣೆ ಮಾಡಿದ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ Rating: 5 Reviewed By: karavali Times
Scroll to Top