ಮಣಿಹಳ್ಳ : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೊಲೀಸರು, ಮರಳು ಸಹಿತ ಟಿಪ್ಪರ್ ವಶಕ್ಕೆ, ಆರೋಪಿ ಚಾಲಕ-ಮಾಲಕರ ವಿರುದ್ದ ಪ್ರಕರಣ ದಾಖಲು - Karavali Times ಮಣಿಹಳ್ಳ : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೊಲೀಸರು, ಮರಳು ಸಹಿತ ಟಿಪ್ಪರ್ ವಶಕ್ಕೆ, ಆರೋಪಿ ಚಾಲಕ-ಮಾಲಕರ ವಿರುದ್ದ ಪ್ರಕರಣ ದಾಖಲು - Karavali Times

728x90

25 February 2024

ಮಣಿಹಳ್ಳ : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೊಲೀಸರು, ಮರಳು ಸಹಿತ ಟಿಪ್ಪರ್ ವಶಕ್ಕೆ, ಆರೋಪಿ ಚಾಲಕ-ಮಾಲಕರ ವಿರುದ್ದ ಪ್ರಕರಣ ದಾಖಲು

ಬಂಟ್ವಾಳ, ಫೆಬ್ರವರಿ 26, 2024 (ಕರಾವಳಿ ಟೈಮ್ಸ್) : ಟಿಪ್ಪರ್ ಲಾರಿಯಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣ ಬೇಧಿಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಲಾರಿ ಚಾಲಕರು ಹಾಗೂ ಮಾಲಕರ ವಿರುದ್ದ ಪ್ರಕರಣ ದಾಖಲಿಸಿಕೊಂಡ ಘಟನೆ ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. 

ಮರಳು ಕಳವು ಹಾಗೂ ಅಕ್ರಮ ಸಾಗಾಟದ ಆರೋಪಿಗಳನ್ನು ಟಿಪ್ಪರ್ ಚಾಲಕ ಕೊಡಂಬೆಟ್ಟು ನಿವಾಸಿ ಅನಿಶ್, ಟಿಪ್ಪರ್ ಚಾಲಕ ಕಂ ಮಾಲಕ ತೆಂಕಕಜೆಕಾರು ಗ್ರಾಮದ ನಿವಾಸಿ ಮಿಥುನ್ ಹಾಗೂ ಟಿಪ್ಪರ್ ಮಾಲಕ ಪ್ರಜ್ವಲ್ ಶೆಟ್ಟಿ ಎಂದು ಹೆಸರಿಸಲಾಗಿದೆ.

ಶನಿವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ ಬಿ ಅವರ ನೇತೃತ್ವದ ಪೊಲೀಸರು ಎರಡು ಟಿಪ್ಪರ್ ಲಾರಿಗಳನ್ನು ತಡೆದು ತಪಾಸಣೆ ನಡೆಸಿದಾಗ ಈ ಮರಳು ಕಳವು ಪ್ರಕರಣ ಬೆಳಕಿಗೆ ಬಂದಿದೆ. 

ಮರಳನ್ನು ಅರ್ಕುಳ ಗ್ರಾಮದ ವಳಚ್ಚಿಲ್ ಎಂಬಲ್ಲಿನ ನೇತ್ರಾವತಿ ಹೊಳೆಯಿಂದ ಕಳವು ಮಾಡಿ ಅಕ್ರಮ ಸಾಗಾಟ ಮಾಡುವ ಬಗ್ಗೆ ಚಾಲಕ-ಮಾಲಕರು ಒಪ್ಪಿಕೊಂಡಿದ್ದು, ಮರಳು ಸಹಿತ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮಣಿಹಳ್ಳ : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೊಲೀಸರು, ಮರಳು ಸಹಿತ ಟಿಪ್ಪರ್ ವಶಕ್ಕೆ, ಆರೋಪಿ ಚಾಲಕ-ಮಾಲಕರ ವಿರುದ್ದ ಪ್ರಕರಣ ದಾಖಲು Rating: 5 Reviewed By: karavali Times
Scroll to Top