ರಾಜಕೀಯವಾಗಿ ಎಂದಿಗೂ ಒಳ ಒಪ್ಪಂದ ಮಾಡಿಕೊಳ್ಳದ ನನಗೆ ಈ ಬಾರಿ ಲೋಕಸಭಾ ಸ್ಪರ್ಧೆಗೆ ಬಿಜೆಪಿ ಅವಕಾಶ ನೀಡಲೇಬೇಕು : ಸತ್ಯಜಿತ್ ಸುರತ್ಕಲ್ ಆಗ್ರಹ - Karavali Times ರಾಜಕೀಯವಾಗಿ ಎಂದಿಗೂ ಒಳ ಒಪ್ಪಂದ ಮಾಡಿಕೊಳ್ಳದ ನನಗೆ ಈ ಬಾರಿ ಲೋಕಸಭಾ ಸ್ಪರ್ಧೆಗೆ ಬಿಜೆಪಿ ಅವಕಾಶ ನೀಡಲೇಬೇಕು : ಸತ್ಯಜಿತ್ ಸುರತ್ಕಲ್ ಆಗ್ರಹ - Karavali Times

728x90

25 February 2024

ರಾಜಕೀಯವಾಗಿ ಎಂದಿಗೂ ಒಳ ಒಪ್ಪಂದ ಮಾಡಿಕೊಳ್ಳದ ನನಗೆ ಈ ಬಾರಿ ಲೋಕಸಭಾ ಸ್ಪರ್ಧೆಗೆ ಬಿಜೆಪಿ ಅವಕಾಶ ನೀಡಲೇಬೇಕು : ಸತ್ಯಜಿತ್ ಸುರತ್ಕಲ್ ಆಗ್ರಹ

ಬಂಟ್ವಾಳ, ಫೆಬ್ರವರಿ 26, 2024 (ಕರಾವಳಿ ಟೈಮ್ಸ್) : ಹಿಂದುತ್ವದ ಪ್ರಯೋಗ ಶಾಲೆ ಎಂದೇ ಗುರುತಿಸಿಕೊಂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 26 ವರ್ಷಗಳಿಂದ ಹಿಂದುತ್ವ ಮತ್ತು ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗಲು ಪ್ರಾಣ ಒತ್ತೆಯಿಟ್ಟು ದುಡಿದ ನನ್ನಂತಹವರಿಗೆ ಬಿಜೆಪಿ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂಬುದು ಸಹಸ್ರಾರು ಮಂದಿ ಕಾರ್ಯಕರ್ತರ ಒಕ್ಕೊರಳ ಆಗ್ರಹವಾಗಿದೆ ಎಂದು ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದರು. 

ಬ್ರಹ್ಮರಕೂಟ್ಲು ಸಮೀಪದ ಬಂಟವಾಳ ಬಂಟರ ಭವನದಲ್ಲಿ ಭಾನುವಾರ ಸಂಜೆ ನಡೆದ ಜನಾಗ್ರಹ ಸಮಾವೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಒಬ್ಬರಿಗೆ ಎರಡು ಅಥವಾ ಮೂರು ಅವಧಿಗೆ ಮಾತ್ರ ಸ್ಪರ್ಧಿಸಲು ಅವಕಾಶ ನೀಡಬೇಕು. ಮಾತ್ರವಲ್ಲದೆ ಪಕ್ಷಾಂತರಿಗಳು, ಬಲಿಷ್ಠ ಸಮುದಾಯಗಳಿಗೆ ಮಣೆ ಹಾಕುವ ಬದಲಾಗಿ ಹಿಂದುತ್ವ ಮತ್ತು ಪಕ್ಷದ ಸಿದ್ಧಾಂತ ಉಳಿವಿಗೆ ಶ್ರಮ ವಹಿಸಿದ ಕಾರ್ಯಕರ್ತರಿಗೆ ಪ್ರಥಮ ಆದ್ಯತೆ ಸಿಗಬೇಕು. ಆ ಮೂಲಕ ರಾಜ್ಯದಲ್ಲಿ ಹಿಂದುತ್ವ ಮತ್ತು ಹಿಂದುಳಿದ ವರ್ಗ ಸಮುದಾಯ ಬಲಿಷ್ಟಗೊಂಡು ಸಾಮಾಜಿಕ ನ್ಯಾಯ ಸಿಗಲು ಸಹಕಾರಿಯಾಗುತ್ತದೆ ಎಂದರು. 

ಕಳೆದ 6 ವರ್ಷಗಳಿಂದ ನನಗೆ ಯಾವುದೇ ಜವಾಬ್ದಾರಿ ನೀಡದೆ ಕಡೆಗಣಿಸಿದ ಪಕ್ಷದ ಕೆಲವೊಂದು ಸ್ವಹಿತಾಸಕ್ತಿ ಹೊಂದಿರುವ ವ್ಯಕ್ತಿಗಳು ಸರಕಾರ ನನಗೆ ನೀಡಿದ್ದ ಭದ್ರತಾ ಸಿಬ್ಬಂದಿಯನ್ನೂ ವಾಪಾಸು ಕರೆಸಿಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು ಈ ಹಿಂದೆ ಹಲವು ಬಾರಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಅವಕಾಶ ತಪ್ಪಿಸಲಾಗಿದ್ದು, ಎಂದಿಗೂ ಒಳ ಒಪ್ಪಂದ ರಾಜಕೀಯ ಮಾಡಿಕೊಳ್ಳದ ನನಗೆ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ನೀಡಲೇಬೇಕು ಎಂದು ಆಗ್ರಹಿಸಿದರು. 

ಡಾ ಶ್ಯಾಮಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ, ಡಾ ವಿ ಎಸ್ ಆಚಾರ್ಯ ಅವರು ಕಲಿಸಿಕೊಟ್ಟ ಪಕ್ಷದ ತತ್ವ ಸಿದ್ಧಾಂತಗಳಿಗೆ ಧಕ್ಕೆಯಾಗದಂತೆ ದೇಶದೆಲ್ಲೆಡೆ ತ್ರಿವರ್ಣ ಧ್ವಜ ಮತ್ತು ಭಗವಾಧ್ವಜ ಹಾರಾಡುವಂತಾಗಬೇಕು ಎಂದರು. 

ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆ ಮಾಜಿ ಅಧ್ಯಕ್ಷ ಅಚ್ಚುತ ಕಲ್ಮಾಡಿ, ಶಿವಮೊಗ್ಗ ವಿಭಾಗ ಸಹ ಸಂಚಾಲಕ ಮಂಜುನಾಥ ದಾವಣಗೆರೆ, ಕೊಡಗು ಜಿಲ್ಲಾ ಸಂಚಾಲಕ ಟಿ ಪಿ ಗಾಂಧಿ, ಚಿಕ್ಕಮಗಳೂರು ಜಿಲ್ಲಾ ಸಂಚಾಲಕ ಕೆ ಟಿ ಮಂಜುನಾಥ, ಮಾಜಿ ಸೈ£ಕರ ಸಂಘದ ಕೊಡಗು ಜಿಲ್ಲಾ ಉಪಾಧ್ಯಕ್ಷ ಹವಾಲ್ದಾರ್ ಸುಧೀರ್ ಕುಮಾರ್, ನಾರಾಯಣ ವಿಚಾರ ವೇದಿಕೆ ರಾಜ್ಯ ಕಾರ್ಯಾಧ್ಯಕ್ಷ ನಾಗರಾಜ ಗುತ್ತೇದಾರ್, ಶಿವಮೊಗ್ಗ ಜಿಲ್ಲಾ ಉಪಾಧ್ಯಕ್ಷ ಆದರ್ಶ ಶಿವಮೊಗ್ಗ, ವಿಶ್ವ ಹಿಂದೂ ಪರಿಷತ್ ಸುರತ್ಕಲ್ ಪ್ರಖಂಡ ಅಧ್ಯಕ್ಷ ಭಾಸ್ಕರ ರಾವ್, ಪ್ರಮುಖರಾದ ರವಿರಾಜ್ ಬಿ ಸಿ ರೋಡು, ಸಂದೀಪ್ ಪಂಪ್‍ವೆಲ್, ಧನಂಜಯ ಕುಂದಾಪುರ, ಆನಂದ ನಾಯ್ಕ ಭಟ್ಕಳ, ಕೃಷ್ಣಮೂರ್ತಿ ಬೆಂಗಳೂರು, ಕರುಣಾಕರ ಗೌಡ ಬರೆಮೇಲು, ಧನಂಜಯ ಪಟ್ಲ ಪುತ್ತೂರು, ಪ್ರದೀಪ ಬಜಿಲಕೇರಿ, ಸುಕೇಶ ಶೆಟ್ಟಿ ಕಿ£್ನಗೋಳಿ, ಪ್ರವೀಣ ಮೂಡಿಗೆರೆ, ಯಶಪಾಲ್ ಸಾಲ್ಯಾನ್, ಜಗದೀಶ ನೆತ್ತರಕೆರೆ, ಜನಾರ್ದನ ಬೆಳ್ತಂಗಡಿ, ನವೀನ ಕೊಟ್ಯಾನ್ ಬಿ ಸಿ ರೋಡು, ದಿನೇಶ ಸುವರ್ಣ ಮೊದಲಾದವರು ಸಮಾವೇಶದಲ್ಲಿ ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ರಾಜಕೀಯವಾಗಿ ಎಂದಿಗೂ ಒಳ ಒಪ್ಪಂದ ಮಾಡಿಕೊಳ್ಳದ ನನಗೆ ಈ ಬಾರಿ ಲೋಕಸಭಾ ಸ್ಪರ್ಧೆಗೆ ಬಿಜೆಪಿ ಅವಕಾಶ ನೀಡಲೇಬೇಕು : ಸತ್ಯಜಿತ್ ಸುರತ್ಕಲ್ ಆಗ್ರಹ Rating: 5 Reviewed By: karavali Times
Scroll to Top