ಜೆರೋಸಾ ಶಾಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನಾ ಸಮಿತಿ ರಚಿಸಿ ತನಿಖೆ ನಡೆಸಬೇಕು : ರೈ, ಸೊರಕೆ ಆಗ್ರಹ - Karavali Times ಜೆರೋಸಾ ಶಾಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನಾ ಸಮಿತಿ ರಚಿಸಿ ತನಿಖೆ ನಡೆಸಬೇಕು : ರೈ, ಸೊರಕೆ ಆಗ್ರಹ - Karavali Times

728x90

14 February 2024

ಜೆರೋಸಾ ಶಾಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನಾ ಸಮಿತಿ ರಚಿಸಿ ತನಿಖೆ ನಡೆಸಬೇಕು : ರೈ, ಸೊರಕೆ ಆಗ್ರಹ

ಮಂಗಳೂರು, ಫೆಬ್ರವರಿ 14, 2024 (ಕರಾವಳಿ ಟೈಮ್ಸ್) : ನಗರದ ಜೆಪ್ಪುವಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯೊಬ್ಬರು ಧರ್ಮನಿಂದನೆ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರ ಸತ್ಯಶೋಧನಾ ಸಮಿತಿ ರಚಿಸಿ ತ£ಖೆ ನಡೆಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ ರಮಾನಾಥ್ ರೈ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಜಂಟಿಯಾಗಿ ಆಗ್ರಹಿಸಿದ್ದಾರೆ.

ಮಂಗಳವಾರ ಪಕ್ಷದ ಮುಖಂಡರೊಂದಿಗೆ ಶಾಲೆಗೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆರೋಸಾ ಶಾಲಾ ಪ್ರಕರಣದ ಬಗ್ಗೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚಿಸಿ ತನಿಖೆಯಾಗಬೇಕೆಂದು ಸರಕಾರಕ್ಕೆ ಒತ್ತಾಯಿಸುತ್ತೇವೆ ಎಂದರು. 

ಶಾಲಾ ವಿವಾದವನ್ನು ಮುಂದಿಟ್ಟು ನಡೆದ ಬೆಳವಣಿಗೆಗಳು ಜಿಲ್ಲೆಯ ಕೋಮು ಸೌಹಾರ್ದತೆಗೆ ಧಕ್ಕೆ ತಂದಿದೆ. ಕೋಮು ಸೌಹಾರ್ದತೆ ಕಾಪಾಡುವುದು ನಮ್ಮ ಉದ್ದೇಶ. ಕೆಲವರು ಘಟನೆಯಿಂದ ರಾಜಕೀಯ ಲಾಭ ಪಡೆಯಲು ಪಯತ್ನಿಸುತ್ತಿದ್ದಾರೆ. ಇದಕ್ಕೆ ಸರಕಾರ ಅವಕಾಶ ನೀಡಬಾರದು. ಕಾಂಗ್ರೆಸ್ ಪಕ್ಷ ಸುಂದರ ಸಮಾಜ ನಿರ್ಮಾಣದ ಜವಾಬ್ದಾರಿ ಹೊಂದಿದೆ. ಇದು ಎಲ್ಲರ ಜವಾಬ್ದಾರಿಯೂ ಆಗಬೇಕಿದೆ. ಸರಿ ತಪ್ಪುಗಳ ಬಗ್ಗೆ ಚರ್ಚೆಯಾಗಬೇಕು. ಸತ್ಯಗಳು ಹೊರಬರಬೇಕು ಎಂದವರು ಆಗ್ರಹಿಸಿದರು. 

ವಿದ್ಯಾರ್ಥಿಗಳ ಹೇಳಿಕೆಗಳು, ರಾಜಕಾರಣಿಗಳು ವಿದ್ಯಾರ್ಥಿಗಳ ಹೇಳಿಕೆಗಳನ್ನು ದುರ್ಬಳಕೆ ಮಾಡಿಕೊಂಡಿರುವುದು ಸೇರಿದಂತೆ ಎಲ್ಲದರ ಬಗ್ಗೆಯೂ ತನಿಖೆ ನಡೆಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವರುಗಳು ಒತ್ತಾಯಿಸಿದರು. 

ಇಂತಹ ಶಾಲಾ ವಿಷಯಗಳಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಪರಿಹರಿಸುವ ಹೊಣೆಗಾರಿಕೆ ಶಿಕ್ಷಣ ಇಲಾಖೆಯ ಮೇಲಿದೆ. ಇಲಾಖೆ ಅದನ್ನು ರಾಜಕೀಯ ದಾಳಕ್ಕೆ ಬಲಿಯಾಗದೆ ಸಮರ್ಪಕವಾಗಿ ಪರಿಹರಿಸಬೇಕು ಎಂದು ಶಿಕ್ಷಣ ಇಲಾಖೆಯನ್ನು ಇದೇ ವೇಳೆ ಅವರು ಆಗ್ರಹಿಸಿದರು. 

ಈ ಸಂದರ್ಭ ಕೆಪಿಸಿಸಿ ವಕ್ತಾರೆ ಫರ್ಝಾನಾ, ಮಾಜಿ ಶಾಸಕ ಜೆ ಆರ್ ಲೋಬೋ, ಪಕ್ಷ ಪ್ರಮುಖರಾದ ಮಮತಾ ಡಿ ಎಸ್ ಗಟ್ಟಿ, ಪಕ್ಷ ಪ್ರಮುಖರಾದ ಶಶಿಧರ ಹೆಗಡೆ, ಶಾಹುಲ್ ಹಮೀದ್, ಶಾಲೆಟ್ ಪಿಂಟೋ ಮೊದಲಾದವರು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಜೆರೋಸಾ ಶಾಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನಾ ಸಮಿತಿ ರಚಿಸಿ ತನಿಖೆ ನಡೆಸಬೇಕು : ರೈ, ಸೊರಕೆ ಆಗ್ರಹ Rating: 5 Reviewed By: karavali Times
Scroll to Top