ಮುರ : ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು, ಸಹಸವಾರ ಆಸ್ಪತ್ರೆಗೆ - Karavali Times ಮುರ : ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು, ಸಹಸವಾರ ಆಸ್ಪತ್ರೆಗೆ - Karavali Times

728x90

23 February 2024

ಮುರ : ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು, ಸಹಸವಾರ ಆಸ್ಪತ್ರೆಗೆ

ಪುತ್ತೂರು, ಫೆಬ್ರವರಿ 23, 2024 (ಕರಾವಳಿ ಟೈಮ್ಸ್) : ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟು ಸಹಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಬಕ ಸಮೀಪದ ಮುರ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. 

ಮೃತ ಸ್ಕೂಟರ್ ಸವಾರನನ್ನು ತೇಜಸ್ ಪಿ (24) ಹಾಗೂ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸಹಸವಾರನನ್ನು ಪವನ್ ಕುಮಾರ್ (26) ಎಂದು ಹೆಸರಿಸಲಾಗಿದೆ. 

ತೇಜಸ್ ಹಾಗೂ ಪವನ್ ಸ್ಕೂಟರಿನಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಿ ಕೆ ಮುಹಮ್ಮದ್ ಎಂಬವರು ಚಲಾಯಿಸಿಕೊಂಡು ಬಂದ ಟಿಪ್ಪರ್ ಲಾರಿ ಮುಂದಿನಿಂದ ಹೋಗುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರರಿಬ್ಬರೂ ಕೂಡಾ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. 

ತಕ್ಷಣ ಸ್ಥಳೀಯರು ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅದಾಗಲೇ ತೇಜಸ್ ಅವರು ಮೃತಪಟ್ಟಿದ್ದಾರೆ. ಪವನ್ ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಕಬಕ-ನೆಹರುನಗರ ನಿವಾಸಿ ಸಂದೀಪ್ ಪಿ (22) ಎಂಬವರು ನೀಡಿದ ದೂರಿನಂತೆ ಪುತ್ತೂರು ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮುರ : ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು, ಸಹಸವಾರ ಆಸ್ಪತ್ರೆಗೆ Rating: 5 Reviewed By: karavali Times
Scroll to Top