ಬೆಳ್ತಂಗಡಿ, ಫೆಬ್ರವರಿ 04, 2024 (ಕರಾವಳಿ ಟೈಮ್ಸ್) : ತಾಲೂಕಿನ ಮುಂಡೂರು ಗ್ರಾಮದ ಕೋಟಿಕಟ್ಟೆ ಅಂಗನವಾಡಿ ಬಳಿ ಹಣವನ್ನು ಪಣವಾಗಿಟ್ಟು, ಕೋಳಿ ಅಂಕದ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ಶನಿವಾರ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಕೆ ಶರತ್, ರಾಜೇಂದ್ರ ಪೂಜಾರಿ ಹಾಗೂ ವಿಠಲ ಶೆಟ್ಟಿ ಎಂದು ಹೆಸರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಠಾಣಾ ಪಿಎಸ್ಸೈ ಮುರಳಿಧರ ನಾಯ್ಕ ಕೆ ಜಿ ಅವರ ನೇತೃತ್ವದ ಪೊಲೀಸರು ಈ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆರೋಪಿಗಳ ಸಹಿತ ಕೋಳಿಗಳು, ಕತ್ತಿಗಳು ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment