ಬಂಟ್ವಾಳ, ಫೆಬ್ರವರಿ 03, 2024 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೆÇಲೀಸ್ ಠಾಣೆಯ ಅಪರಾಧ ಕ್ರಮಾಂಕ 60/2013 ಕಲಂ 341, 504, 324, 506 ಜೊತೆಗೆ 34 ಐಪಿಸಿ ಪ್ರಕರಣದ ಆರೋಪಿಯಾಗಿ, ಕಳೆದ ಸುಮಾರು 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ, ಬಂಟ್ವಾಳ ತಾಲೂಕು, ಸಜಿಪಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಆನೆ ಇಲ್ಯಾಸ್ (50) ಎಂಬಾತನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಶುಕ್ರವಾರ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಲತೀಫ್ ಹಾಗೂ ಮಲ್ಲಿಕ್ ಸಾಬ್ ಅವರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
0 comments:
Post a Comment