ಬಂಟ್ವಾಳ, ಫೆಬ್ರವರಿ 05, 2024 (ಕರಾವಳಿ ಟೈಮ್ಸ್) : ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮ ರೂವಾರಿ, ಸುನ್ನೀ ವಿದ್ವಾಂಸ ಕೇರಳ-ವಾಯಕ್ಕಾಡಿನ ಉಸ್ತಾದ್ ವಲಿಯುದ್ದೀನ್ ಫೈಝಿ ಅವರು ಫೆಬ್ರವರಿ 6 ರಂದು ಮಂಗಳವಾರ ರಾತ್ರಿ (ನಾಳೆ_ ಆಲಡ್ಕಕ್ಕೆ ಆಗಮಿಸಲಿದ್ದಾರೆ.
ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಹಾಗೂ ಎಸ್ ಕೆ ಎಸ್ ಎಸ್ ಎಫ್ ಆಲಡ್ಕ ಶಾಖೆ ಇದರ ದಶ ವಾರ್ಷಿಕ ಸಂಭ್ರಮದ ಪ್ರಯುಕ್ತ ಮಂಗಳವಾರ ಆಲಡ್ಕದ ಮರ್ ಹೂಂ ಶೈಖುನಾ ಶಂಸುಲ್ ಉಲಮಾ ನಗರ, ಮರ್ ಹೂಂ ಶೈಖುನಾ ಮಿತ್ತಬೈಲು ಉಸ್ತಾದ್ ದ್ವಾರ, ಮರ್ಹೂಂ ಶೈಖುನಾ ಸಜಿಪ ಉಸ್ತಾದ್ ವೇದಿಕೆಯಲ್ಲಿ ನಡೆಯುವ ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮಕ್ಕೆ ಉಸ್ತಾದ್ ವಲಿಯುದ್ದೀನ್ ಫೈಝಿ ಅವರು ನೇತೃತ್ವ ನೀಡಲಿದ್ದಾರೆ.
ಸಯ್ಯಿದ್ ಹುಸೈನ್ ಬಾ-ಅಲವಿ ತಂಙಳ್ ಕುಕ್ಕಾಜೆ ಅವರು ದುವಾಶಿರ್ವಚನಗೈಯಲಿದ್ದು, ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯಾಧ್ಯಕ್ಷ ಕೆ ಪಿ ಇರ್ಶಾದ್ ದಾರಿಮಿ ಅಲ್-ಜಝರಿ ಮಿತ್ತಬೈಲು ಅವರು ಉದ್ಘಾಟಿಸುವರು. ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾಧ್ಯಕ್ಷ ಮುಹಮ್ಮದ್ ಇಶಾಕ್ ಅಧ್ಯಕ್ಷತೆ ವಹಿಸುವರು.
ಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ಪ್ರಧಾನ ಕಾರ್ಯದರ್ಶಿ ಅಬೂಸ್ವಾಲಿಹ್ ಫೈಝಿ, ನಂದಾವರ ಕೇಂದ್ರ ಜುಮಾ ಮಸೀದಿ ಖತೀಬ್ ಖಾಸಿಂ ದಾರಿಮಿ, ಅಕ್ಕರಂಗಡಿ ಕೇಂದ್ರ ಜುಮಾ ಮಸೀದಿ ಖತೀಬ್ ಉಸ್ಮಾನ್ ರಾಝಿ ಬಾಖವಿ, ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿ ಖತೀಬ್ ಹಸ್ವೀಫ್ ದಾರಿಮಿ, ನೆಹರುನಗರ ಬದ್ರಿಯಾ ಜುಮಾ ಮಸೀದಿ ಖತೀಬ್ ಸಲಾಂ ಇರ್ಫಾನಿ, ಗೂಡಿನಬಳಿ ಮಸ್ಜಿದ್-ಎ-ಮುತ್ತಲಿಬ್ ಖತೀಬ್ ಅಶ್ರಫ್ ಫೈಝಿ ಮಲಾರ್, ಮಾಜಿ ಸಚಿವ ಬಿ ರಮಾನಾಥ ರೈ ಸಹಿತ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾ ಕೋಶಾಧಿಕಾರಿ ಹನೀಫ್ ಹಾಸ್ಕೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment