ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಪ್ರಾಣ ಬಿಟ್ಟ ಯುವತಿ, ಮೃತದೇಹ ಮೇಲಕ್ಕೆತ್ತಿದ ಗೂಡಿನಬಳಿ ಜೀವರಕ್ಷಕ ತಂಡದ ಯುವಕರು - Karavali Times ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಪ್ರಾಣ ಬಿಟ್ಟ ಯುವತಿ, ಮೃತದೇಹ ಮೇಲಕ್ಕೆತ್ತಿದ ಗೂಡಿನಬಳಿ ಜೀವರಕ್ಷಕ ತಂಡದ ಯುವಕರು - Karavali Times

728x90

14 February 2024

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಪ್ರಾಣ ಬಿಟ್ಟ ಯುವತಿ, ಮೃತದೇಹ ಮೇಲಕ್ಕೆತ್ತಿದ ಗೂಡಿನಬಳಿ ಜೀವರಕ್ಷಕ ತಂಡದ ಯುವಕರು

 





ಬಂಟ್ವಾಳ, ಫೆಬ್ರವರಿ 15, 2024 (ಕರಾವಳಿ ಟೈಮ್ಸ್) : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ ಸಿ ರೋಡು ಸಮೀಪದ ಕೈಕುಂಜೆ ಎಂಬಲ್ಲಿ ಗುರುವಾರ ಮುಂಜಾನೆ ವೇಳೆ ಸಂಭವಿಸಿದೆ.

ಮೃತ ಯುವತಿಯನ್ನು ತುಮಕೂರು ಮೂಲದ ನಯನ (25) ಎಂದು ಪೊಲೀಸರು ಗುರುತಿಸಿದ್ದಾರೆ.

ಗುರುವಾರ ಮುಂಜಾನೆ ಸುಮಾರು 6.25 ರ ವೇಳೆಗೆ ಸಂಚರಿಸುತ್ತಿದ್ದ ರೈಲಿನಿಂದ ಯುವತಿ ನದಿ ನೀರಿಗೆ ಜಿಗಿದಿದ್ದಾಳೆ ಎನ್ನಲಾಗಿದೆ. ರೈಲಿನ ಇತರ ಪ್ರಯಾಣಿಕರು ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಸ್ಥಳೀಯರು ಘಟನೆಯನ್ನು ಖಚಿತ ಪಡಿಸಿಕೊಂಡಿದ್ದಾರೆ. 

ತಕ್ಷಣ ನದಿಯಲ್ಲಿ ದೋಣಿ ಮೂಲಕ ಕಾರ್ಯಾಚರಣೆ ನಡೆಸಿದ ಗೂಡಿನಬಳಿ ನಿವಾಸಿ ಮುಹಮ್ಮದ್ ಮಮ್ಮು ನೇತೃತ್ವದ ಜೀವ ರಕ್ಷಕ ತಂಡದ ಯುವಕರಾದ ಇರ್ಶಾದ್ ಡ್ರೀಮ್ಸ್, ಮನ್ಸೂರ್ (ವಝೀರ್)  ಮೊದಲಾದವರು ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಸಫಲರಾಗಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲಿನಿಂದ ಬಿದ್ದಿದ್ದಾರೋ ಅಥವಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಎಂಬ ಬಗ್ಗೆ ಸಂಶಯಿಸಲಾಗಿದ್ದು,  ರೈಲ್ವೆ ಪ್ರಯಾಣಿಕರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ನದಿಗೆ ಹಾರಿದ್ದಾರೆ ಎನ್ನಲಾಗಿದೆ. ಘಟನೆಗೆ  ನಿಖರ ಕಾರಣ ತಿಳಿದು ಬಂದಿಲ್ಲ. ಯುವತಿಯ ಸಂಬಂಧಿಕರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಪ್ರಾಣ ಬಿಟ್ಟ ಯುವತಿ, ಮೃತದೇಹ ಮೇಲಕ್ಕೆತ್ತಿದ ಗೂಡಿನಬಳಿ ಜೀವರಕ್ಷಕ ತಂಡದ ಯುವಕರು Rating: 5 Reviewed By: lk
Scroll to Top