ಸಜಿಪಮುನ್ನೂರು : ಅಟೋ ರಿಕ್ಷಾಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಪ್ರಯಾಣಿಕಗೆ ಗಾಯ - Karavali Times ಸಜಿಪಮುನ್ನೂರು : ಅಟೋ ರಿಕ್ಷಾಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಪ್ರಯಾಣಿಕಗೆ ಗಾಯ - Karavali Times

728x90

25 February 2024

ಸಜಿಪಮುನ್ನೂರು : ಅಟೋ ರಿಕ್ಷಾಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಪ್ರಯಾಣಿಕಗೆ ಗಾಯ

ಬಂಟ್ವಾಳ, ಫೆಬ್ರವರಿ 26, 2024 (ಕರಾವಳಿ ಟೈಮ್ಸ್) : ಅಟೋ ರಿಕ್ಷಾಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಓರ್ವ ಪ್ರಯಾಣಿಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಪು ಎಂಬಲ್ಲಿ ಭಾನುವಾರ (ಫೆ 25) ಮಧ್ಯಾಹ್ನ ನಡೆದಿದೆ. 

ಗಾಯಾಳು ಪ್ರಯಾಣಿಕನನ್ನು ಜಯಂತ್ ಎಂದು ಹೆಸರಿಸಲಾಗಿದೆ. ಈ ಬಗ್ಗೆ ಸಜಿಪಮುನ್ನೂರು ಗ್ರಾಮದ ನಿವಾಸಿ ಸಂಕಪ್ಪ ಪೂಜಾರಿ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇವರು ತನ್ನ ಅಟೋ ರಿಕ್ಷಾದಲ್ಲಿ ಪರಿಚಯದ ಜಯಂತ ಎಂಬವರನ್ನು ಕುಳ್ಳಿರಿಸಿಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಅಭಿಲಾಷ್ ಎಂಬವರು ಚಲಾಯಿಸಿಕೊಂಡು ಬಂದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. 

ಅಪಘಾತದ ತೀವ್ರತೆಗೆ ಸಂಕಪ್ಪ ಅವರ ರಿಕ್ಷಾದಲ್ಲಿದ್ದ ಜಯಂತ ಅವರು ಗಾಯಗೊಂಡಿದ್ದು, ಅವರನ್ನು ಬಿ ಸಿ ರೋಡಿನ ಸೋಮಯಾಜಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಸಜಿಪಮುನ್ನೂರು : ಅಟೋ ರಿಕ್ಷಾಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಪ್ರಯಾಣಿಕಗೆ ಗಾಯ Rating: 5 Reviewed By: karavali Times
Scroll to Top