ಸರಕಾರಿ ಶಾಲೆಗಳ ಜೊತೆಗೆ ಅಂಗನವಾಡಿ ಕೇಂದ್ರಗಳಿಗೂ ಉಚಿತ ವಿದ್ಯುತ್, ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಸಕಾರಾತ್ಮಕ ಕ್ರಮ : ಸಿಎಂ ಸಿದ್ದರಾಮಯ್ಯ - Karavali Times ಸರಕಾರಿ ಶಾಲೆಗಳ ಜೊತೆಗೆ ಅಂಗನವಾಡಿ ಕೇಂದ್ರಗಳಿಗೂ ಉಚಿತ ವಿದ್ಯುತ್, ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಸಕಾರಾತ್ಮಕ ಕ್ರಮ : ಸಿಎಂ ಸಿದ್ದರಾಮಯ್ಯ - Karavali Times

728x90

11 March 2024

ಸರಕಾರಿ ಶಾಲೆಗಳ ಜೊತೆಗೆ ಅಂಗನವಾಡಿ ಕೇಂದ್ರಗಳಿಗೂ ಉಚಿತ ವಿದ್ಯುತ್, ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಸಕಾರಾತ್ಮಕ ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 12, 2024 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಭಿನ್ನ ಚೇತನರ ಸಂಘಟನೆಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿತು. 

ಈ ಸಂದರ್ಭ ಮಾತನಾಡಿದ ಸಿಎಂ ಸಿದ್ದು ಅವರು, ತಮ್ಮೆಲ್ಲರ ನ್ಯಾಯಯುತ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ 11,500/- ರೂಪಾಯಿ, 10,000/- ರೂಪಾಯಿ ಹಾಗೂ ಸಹಾಯಕಿಯರಿಗೆ 6,000/- ರೂಪಾಯಿಗಳನ್ನು ಸದ್ಯ ನೀಡಲಾಗುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕೆಂಬ ಮನವಿ ಇದೆ. ಕೇಂದ್ರದಿಂದ ಬರಬೇಕಾದ ಅನುದಾನ ಬರುತ್ತಿಲ್ಲವಾದ್ದರಿಂದ ತಕ್ಷಣಕ್ಕೆ ಬೇಡಿಕೆ ಈಡೇರಿಸುವುದು ಕಷ್ಟಸಾಧ್ಯ ಎಂದರು. 

ಈಗಾಗಲೇ ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡುವ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1 ಸಾವಿರ ರೂಪಾಯಿ ಹೆಚ್ಚಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದ ಸಿಎಂ ಗೃಹಲಕ್ಷ್ಮೀ ಯೋಜನೆಯಡಿ 2 ಸಾವಿರ ರೂಪಾಯಿಗಳನ್ನು ಮನೆ ಯಜಮಾನಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರಿಗೂ ಒದಗಿಸಲಾಗುತ್ತಿದೆ. ಶೇ. 60 ಅಂಗನವಾಡಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ಹಣ ದೊರೆಯುತ್ತಿದೆ. ಇದು ಕುಟುಂಬ ನಿರ್ವಹಣೆಗೆ ನೆರವಾಗುತ್ತಿದೆ ಎಂದರು. 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೊಂದಿಗೆ ಸುಮಾರು 20ಕ್ಕೂ ಹೆಚ್ಚು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಸರಕಾರಿ ಶಾಲೆಗಳ ಜೊತೆಗೆ ಅಂಗನವಾಡಿ ಕೇಂದ್ರಗಳಿಗೂ ಉಚಿತ ವಿದ್ಯುತ್, ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಸಕಾರಾತ್ಮಕ ಕ್ರಮ : ಸಿಎಂ ಸಿದ್ದರಾಮಯ್ಯ Rating: 5 Reviewed By: karavali Times
Scroll to Top