ಬಂಟ್ವಾಳ : ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲು - Karavali Times ಬಂಟ್ವಾಳ : ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲು - Karavali Times

728x90

1 March 2024

ಬಂಟ್ವಾಳ : ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲು

ಬಂಟ್ವಾಳ, ಮಾರ್ಚ್ 01, 2024 (ಕರಾವಳಿ ಟೈಮ್ಸ್) : ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ಪಾದಚಾರಿ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಸಮೀಪದ ಭಂಡಾರಿಬೆಟ್ಟು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.

ಗಾಯಗೊಂಡ ಪಾದಚಾರಿ ವ್ಯಕ್ತಿಯನ್ನು ಅಮ್ಟೂರು ಗ್ರಾಮದ ನಿವಾಸಿ ಜನಾರ್ದನ (66) ಎಂದು ಗುರುತಿಸಲಾಗಿದೆ. ಇವರು ಗುರುವಾರ ಸಂಜೆ ಭಂಡಾರಿಬೆಟ್ಟು ಎಂಬಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಬೆಳ್ತಂಗಡಿ ಕಡೆಯಿಂದ ಬಂದ ಇಬ್ರಾಹಿಂ ಎಂಬವರು ಚಲಾಯಿಸುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡದು ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಜನಾರ್ದನ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲು Rating: 5 Reviewed By: karavali Times
Scroll to Top