ಮಾರ್ಚ್ 9 ರಂದು ಬಿ.ಸಿ.ರೋಡಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ - Karavali Times ಮಾರ್ಚ್ 9 ರಂದು ಬಿ.ಸಿ.ರೋಡಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ - Karavali Times

728x90

7 March 2024

ಮಾರ್ಚ್ 9 ರಂದು ಬಿ.ಸಿ.ರೋಡಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ

ಬಂಟ್ವಾಳ, ಮಾರ್ಚ್ 07, 2024 (ಕರಾವಳಿ ಟೈಮ್ಸ್) : ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಸಾರ್ವಜನಿಕರು ಹಾಗೂ ಗ್ರಾಮೀಣ, ನಗರ ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸಿ ಗ್ಯಾರಂಟಿ ಸಮಾವೇಶ ಆಯೋಜಿಸುವಂತೆ ಸರಕಾರ ಹೊರಡಿಸಿರುವ ನಿದೇಶನದಂತೆ ಬಂಟ್ವಾಳ ತಾಲೂಕಿಗೆ ಸಂಬಂಧಿಸಿ ಮಾರ್ಚ್ 9 ರಂದು ಶನಿವಾರ ಅಪರಾಹ್ನ 2.30ಕ್ಕೆ ಬಿ ಸಿ ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಗ್ಯಾರಂಟಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. 

ಸಮಾವೇಶದಲ್ಲಿ ಅರ್ಹ ಫಲಾನುಭವಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ಬಂಟ್ವಾಳ ತಾಲೂಕು ತಹೀಲ್ದಾರ್ ಅರ್ಚನಾ ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಾರ್ಚ್ 9 ರಂದು ಬಿ.ಸಿ.ರೋಡಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ Rating: 5 Reviewed By: karavali Times
Scroll to Top