ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮಿನಾರಾಯಣ ನಾಪತ್ತೆ - Karavali Times ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮಿನಾರಾಯಣ ನಾಪತ್ತೆ - Karavali Times

728x90

28 March 2024

ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮಿನಾರಾಯಣ ನಾಪತ್ತೆ

ಬಂಟ್ವಾಳ, ಮಾರ್ಚ್ 28, 2024 (ಕರಾವಳಿ ಟೈಮ್ಸ್) : ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಕಳೆದ ಆರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ, ಪೂಂಜಾಲಕಟ್ಟೆ ಸಮೀಪದ ಕೊಲ್ಪದಬೈಲು ನಿವಾಸಿ ಲಕ್ಷ್ಮಿನಾರಾಯಣ ಕೆ (52) ಅವರು ಮಾರ್ಚ್ 27 ರಂದು ಬುಧವಾರ ಮಧ್ಯಾಹ್ನದ ಬಳಿಕ ನಾಪತ್ತೆಯಾಗಿದ್ದಾರೆ. 

ಬುಧವಾರ ಬೆಳಿಗ್ಗೆ ಮನೆಯಿಂದ ಕಚೇರಿಗೆಂದು ಪತ್ನಿ ಬಳಿ ಹೇಳಿ ತೆರಳಿದ್ದ ಇವರು ಸಂಜೆಯಾದರೂ ಮನೆಗೆ ವಾಪಾಸು ಬಂದಿಲ್ಲ. ಈ ಬಗ್ಗೆ ಮನೆ ಮಂದಿ ಕಚೇರಿಯಲ್ಲಿ ವಿಚಾರಿಸಿದಾಗ ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಮನೆಗೆ ಹೋಗುತ್ತೇನೆಂದು ತೆರಳಿದ್ದಾರೆ ಎಂದು ಹೇಳಿದ್ದಾರೆ. 

ಆದರೆ ಲಕ್ಮೀನಾರಾಯಣ ಅವರು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಅವರ ಸಹೋದರ ಮಡಂತ್ಯಾರು ಸಮೀಪದ ಮಾಲಾಡಿ-ವಿದ್ಯಾನಗರ ನಿವಾಸಿ ಕೆ ರಮೇಶ್ ಅವರು ನೀಡಿದ ದೂರಿನಂತೆ ಪೂಂಜಾಲಕಟ್ಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಲಕ್ಷ್ಮಿನಾರಾಯಣ ಅವರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕರ್ತವ್ಯದ ತಂಡದಲ್ಲೂ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ನಾಪತ್ತೆ ಬಗ್ಗೆ ಈಗಾಗಲೇ ತಾಲೂಕು ತಹಶೀಲ್ದಾರ್ ಅವರ ನೇತೃತ್ವದ ನೌಕರರು ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗೂ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆಯೂ ಇವರು ಇದೇ ರೀತಿ ನಾಪತ್ತೆಯಾಗಿದ್ದರು ಎನ್ನಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮಿನಾರಾಯಣ ನಾಪತ್ತೆ Rating: 5 Reviewed By: karavali Times
Scroll to Top