ಬಂಟ್ವಾಳ, ಮಾರ್ಚ್ 25, 2024 (ಕರಾವಳಿ ಟೈಮ್ಸ್) : ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಂ ದ್ವಿಚಕ್ರ ವಾಹನ ಸವಾರ ಮೃತಪಟ್ಟು ಸಹಸವಾರ ಗಾಯಗೊಂಡ ಘಟನೆ ಬೆಳ್ತಂಗಡಿ ಕಸಬಾ ಗ್ರಾಮದ ಹಳೆಕೋಟೆ ಪೆಟ್ರೋಲ್ ಬಂಕ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಮೃತ ದ್ವಿಚಕ್ರ ವಾಹನ ಸವಾರನನ್ನು ಪುರುಷೋತ್ತಮ ಹಾಗೂ ಗಾಯಾಳು ಸಹಸವಾರನನ್ನು ತೌಫೀಕ್ ಅಲಿ ಎಂದು ಹೆಸರಿಸಲಾಗಿದೆ. ಪುರುಷೋತ್ತಮ ಅವರು ತೌಫೀಕ್ ಅಲಿ ಅವರನ್ನು ಕುಳ್ಳಿರಿಸಿಕೊಂಡು ಸಂಚರಿಸುತ್ತಿದ್ದ ವೇಳೆ ಹಳೆಕೋಟೆ ಪೆಟ್ರೋಲ್ ಬಂಕ್ ಬಳಿ ದುಡುಕುತನದಿಂದ ಚಲಾಯಿಸಿಕೊಂಡು ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಪುರುಷೋತ್ತಮ ಹಾಗೂ ತೌಫೀಕ್ ಅಲಿ ಇಬ್ಬರೂ ಕೂಡಾ ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದು ತೀವ್ರ ತರದಲ್ಲಿ ಗಾಯಗೊಂಡಿದ್ದಾರೆ. ತಕ್ಷಣ ಇವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಪುರುಷೋತ್ತಮ ಅವರು ಮೃತಪಟ್ಟಿದ್ದಾರೆ. ಗಾಯಾಳು ತೌಫೀಕ್ ಅಲಿ ಅವರನ್ನು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





















0 comments:
Post a Comment