ಬದನಾಜೆ : ಆಲ್ಟೋ ಕಾರು ಡಿಕ್ಕಿ ಹೊಡೆದು ಬೈಕ್ ಸವಾರಗೆ ಗಾಯ - Karavali Times ಬದನಾಜೆ : ಆಲ್ಟೋ ಕಾರು ಡಿಕ್ಕಿ ಹೊಡೆದು ಬೈಕ್ ಸವಾರಗೆ ಗಾಯ - Karavali Times

728x90

18 March 2024

ಬದನಾಜೆ : ಆಲ್ಟೋ ಕಾರು ಡಿಕ್ಕಿ ಹೊಡೆದು ಬೈಕ್ ಸವಾರಗೆ ಗಾಯ

ಬಂಟ್ವಾಳ, ಮಾರ್ಚ್ 18, 2024 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಬದನಾಜೆ ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. 

ಗಾಯಗೊಂಡ ಬೈಕ್ ಸವಾರನನ್ನು ಹರಿಣಾಕ್ಷ ಎಂದು ಹೆಸರಿಸಲಾಗಿದೆ. ಹರಿಣಾಕ್ಷ ಅವರು ಬೈಕಿನಲ್ಲಿ ಬರುತ್ತಿದ್ದ ವೇಳೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಧಾವಿಸಿ ಬಂದ ಆಲ್ಟೋ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಗಾಯಾಳು ಹರಿಣಾಕ್ಷ ಅವರನ್ನು ಪುತ್ತೂರು ಪ್ರಗತಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬದನಾಜೆ : ಆಲ್ಟೋ ಕಾರು ಡಿಕ್ಕಿ ಹೊಡೆದು ಬೈಕ್ ಸವಾರಗೆ ಗಾಯ Rating: 5 Reviewed By: karavali Times
Scroll to Top