ಅಬಕಾರಿ ನೀತಿ ಪರಿಷ್ಕರಣೆ ಅಕ್ರಮಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ ಅಧಿಕಾರಿಗಳು - Karavali Times ಅಬಕಾರಿ ನೀತಿ ಪರಿಷ್ಕರಣೆ ಅಕ್ರಮಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ ಅಧಿಕಾರಿಗಳು - Karavali Times

728x90

21 March 2024

ಅಬಕಾರಿ ನೀತಿ ಪರಿಷ್ಕರಣೆ ಅಕ್ರಮಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ ಅಧಿಕಾರಿಗಳು

ಭ್ರಷ್ಟಾಚಾರ ವಿರೋಧ ಮೂಲಕ ರಾಜಕೀಯ ಅಸ್ತಿತ್ವ ಕಂಡುಕೊಂಡಿದ್ದ ಕೇಜ್ರಿವಾಲ್ ಇದೀಗ ಅದೇ ವಿಷಯಕ್ಕೆ ಸಂಬಂಧಿಸಿ ಅರೆಸ್ಟ್ 


ನವದೆಹಲಿ, ಮಾರ್ಚ್ 21, 2024 (ಕರಾವಳಿ ಟೈಮ್ಸ್) : ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ್ದು ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆ ನಡೆಸಿ ಇದೀಗ ಬಂಧಿಸಿದೆ.

12 ಅಧಿಕಾರಿಗಳ ತಂಡವು ಸರ್ಚ್ ವಾರಂಟ್‍ನೊಂದಿಗೆ ದೆಹಲಿ ಸಿಎಂ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದವು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು, ಬಳಿಕ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್, ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಎಂಟು ಸಮನ್ಸ್‍ಗಳಿಗೂ ಸ್ಪಂದಿಸಿಲ್ಲ. ದೆಹಲಿ ಜಲ ಮಂಡಳಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಒಂದು ಸಮನ್ಸ್‍ಗೂ ಕೂಡ ಪ್ರತಿಕ್ರಿಯಿಸಿಲ್ಲ.

ಒಂಬತ್ತು ಬಾರಿ ಇ.ಡಿ ಸಮನ್ಸ್ ನೀಡಿದೆ. ಮಧ್ಯಂತರ ರಕ್ಷಣೆ ಕೋರಿ ಕೇಜ್ರಿವಾಲ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಸದ್ಯ ಪ್ರಕರಣ ಸಂಬಂಧ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಇಡಿ ಅಧಿಕಾರಿಗಳ ತಂಡ ದೆಹಲಿ ಸಿಎಂ ನಿವಾಸಕ್ಕೆ ಆಗಮಿಸಿದ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೆÇಲೀಸರು ಭದ್ರತೆ ಹೆಚ್ಚಿಸಿದ್ದಾರೆ ಮತ್ತು ಸಿವಿಲ್ ಲೈನ್ಸ್‍ನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಬ್ಯಾರಿಕೇಡ್‍ಗಳನ್ನು ಹಾಕಲಾಗಿದ್ದು, ಸಹಾಯಕ ಪೆÇಲೀಸ್ ಆಯುಕ್ತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ದೆಹಲಿ ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ದೆಹಲಿ ಪೆÇಲೀಸ್ ಸಿಬ್ಬಂದಿಯೊಂದಿಗೆ ಆರ್ ಎ ಎಫ್ ಹಾಗೂ ಸಿ ಆರ್ ಪಿ ಎಫ್ ಪಡೆಗಳನ್ನು ನಿಯೋಜಿಸಲಾಗಿದೆ. ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ಎಎಪಿ ಕಾರ್ಯಕರ್ತರು ಸೇರುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಪೆÇಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಡಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೋರಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಎಎಪಿ ಕಾರ್ಯಕರ್ತರು ಅರವಿಂದ್ ಕೇಜ್ರಿವಾಲ್ ನಿವಾಸದ ಎದರು ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಸರಕಾರ ಹಾಗೂ ಇಡಿ ಅಧಿಕಾರಿಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ.

ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕವೇ ರಾಜಕೀಯ ಅಸ್ತಿತ್ವ ಕಂಡುಕೊಂಡಿದ್ದ ಕೇಜ್ರಿವಾಲ್ ಇದೀಗ ಅದೇ ವಿಷಯಕ್ಕೆ ಸಂಬಂಧಿಸಿದಂತೆ ಬಂದನಕ್ಕೊಳಗಾಗಿರುವುದು ಮಾತ್ರ ವಿಪರ್ಯಾಸ.

  • Blogger Comments
  • Facebook Comments

0 comments:

Post a Comment

Item Reviewed: ಅಬಕಾರಿ ನೀತಿ ಪರಿಷ್ಕರಣೆ ಅಕ್ರಮಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ ಅಧಿಕಾರಿಗಳು Rating: 5 Reviewed By: karavali Times
Scroll to Top