ತುಮಕೂರಿನಲ್ಲಿ ಬೆಳ್ತಂಗಡಿಯ ಯುವಕರ ಸುಟ್ಟುಕೊಂದ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್ಪಿಗೆ ಮನವಿ - Karavali Times ತುಮಕೂರಿನಲ್ಲಿ ಬೆಳ್ತಂಗಡಿಯ ಯುವಕರ ಸುಟ್ಟುಕೊಂದ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್ಪಿಗೆ ಮನವಿ - Karavali Times

728x90

26 March 2024

ತುಮಕೂರಿನಲ್ಲಿ ಬೆಳ್ತಂಗಡಿಯ ಯುವಕರ ಸುಟ್ಟುಕೊಂದ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್ಪಿಗೆ ಮನವಿ

ಮಂಗಳೂರು, ಮಾರ್ಚ್ 26, 2024 (ಕರಾವಳಿ ಟೈಮ್ಸ್) : ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಕೊಂದ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ಜಿಲ್ಲಾ ಎಸ್ಪಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

“ದುಷ್ಕರ್ಮಿಗಳ ತಂಡವೊಂದು ಮೋಸದಿಂದ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂವರು ಯುವಕರನ್ನು ತುಮಕೂರಿಗೆ ಕರೆಸಿ ಹಣ ದೋಚಿ ಹತ್ಯೆ ಮಾಡಿದೆ. ಪತ್ರಿಕೆ ವರದಿಗಳ ಮೂಲಕ ಹತ್ಯೆಗೀಡಾದವರು 6 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಕೊಲೆಗಡುಕರು 60 ಲಕ್ಷದಿಂದ 1 ಕೋಟಿ ರೂಪಾಯಿವರೆಗೆ ದೋಚಿದ್ದಾರೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾ ಸತ್ಯತೆಯನ್ನು ಬಯಲಿಗೆಳೆಯಬೇಕು. ಮೋಸದ ಜಾಲದ ಹಿಂದಿರುವ ನೈಜ ಆರೋಪಿಗಳನ್ನು ಬಂಧಿಸಬೇಕು. ಆ ಮೂಲಕ ಈ ಮೂರು ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕು. ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ಸೂಕ್ತ ಕ್ರಮಕೈಗೊಳ್ಳಬೇಕು” ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಶುಭಾಶ್ಚಂದ್ರ ಶೆಟ್ಟಿ ಇದ್ದರು.

ಇದಕ್ಕೂ ಮುನ್ನ ಕೊಲೆಯಾದ ಬೆಳ್ತಂಗಡಿಯ ಮೂವರು ಯುವಕರ ಮನೆಗೆ ಭೇಟಿ ನೀಡಿದ ನಿಯೋಗ, ರಾಜ್ಯ ಸರಕಾರ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿತು.

  • Blogger Comments
  • Facebook Comments

0 comments:

Post a Comment

Item Reviewed: ತುಮಕೂರಿನಲ್ಲಿ ಬೆಳ್ತಂಗಡಿಯ ಯುವಕರ ಸುಟ್ಟುಕೊಂದ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್ಪಿಗೆ ಮನವಿ Rating: 5 Reviewed By: karavali Times
Scroll to Top