ಫರಂಗಿಪೇಟೆ : ಅರಣ್ಯ ಇಲಾಖೆಗೆ ಸೇರಿದ ಜೀಪ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಅಪರಿಚಿತ ಪಾದಚಾರಿ ಮೃತ್ಯು - Karavali Times ಫರಂಗಿಪೇಟೆ : ಅರಣ್ಯ ಇಲಾಖೆಗೆ ಸೇರಿದ ಜೀಪ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಅಪರಿಚಿತ ಪಾದಚಾರಿ ಮೃತ್ಯು - Karavali Times

728x90

6 March 2024

ಫರಂಗಿಪೇಟೆ : ಅರಣ್ಯ ಇಲಾಖೆಗೆ ಸೇರಿದ ಜೀಪ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಅಪರಿಚಿತ ಪಾದಚಾರಿ ಮೃತ್ಯು

ಬಂಟ್ವಾಳ, ಮಾರ್ಚ್ 06, 2024 (ಕರಾವಳಿ ಟೈಮ್ಸ್) : ಅರಣ್ಯ ಇಲಾಖೆಗೆ ಸೇರಿದ ಸರಕಾರಿ ಜೀಪ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಅಪರಿಚಿತ ಪಾದಚಾರಿ ಮೃತಪಟ್ಟ ಘಟನೆ ಪುದು ಗ್ರಾಮದ ಫರಂಗಿಪೇಟೆ ಜಂಕ್ಷನ್ನಿನಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ. 

ಕೆಎ21 ಜಿ0077 ನೋಂದಣಿ ಸಂಖ್ಯೆಯ ಅರಣ್ಯ ಇಲಾಖೆಗೆ ಸೇರಿದ ಸರಕಾರಿ ಜೀಪನ್ನು ಅದರ ಚಾಲಕ ಜಗದೀಶ್ ಗೌಡ ಅವರು ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಹೆದ್ದಾರಿ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟ ಅಪರಿಚಿತ ಪಾದಚಾರಿಯ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿರುತ್ತದೆ. ತಕ್ಷಣ ಅವರನ್ನು ಸ್ಥಳೀಯ ಸಾರ್ವಜನಿಕರು ಅದೇ ಸರಕಾರಿ ಜೀಪಿನಲ್ಲಿ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಗೆ ಸಾಗಿಸಿದರಾದರೂ ಅದಾಗಲೇ ಗಾಯಾಳು ಅಪರಿಚಿತ ಮೃತಪಟ್ಟಿದ್ದಾರೆ. 

ಈ ಬಗ್ಗೆ ಪುದು ಗ್ರಾಮದ ನಿವಾಸಿ ಮುಹಮ್ಮದ್ ಮುಸ್ತಾಫ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಫರಂಗಿಪೇಟೆ : ಅರಣ್ಯ ಇಲಾಖೆಗೆ ಸೇರಿದ ಜೀಪ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಅಪರಿಚಿತ ಪಾದಚಾರಿ ಮೃತ್ಯು Rating: 5 Reviewed By: karavali Times
Scroll to Top