ಮಾಲಾಡಿ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ - Karavali Times ಮಾಲಾಡಿ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ - Karavali Times

728x90

12 March 2024

ಮಾಲಾಡಿ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ

ಬಂಟ್ವಾಳ, ಮಾರ್ಚ್ 12, 2024 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿ ಸೋಮವಾರ ನಡೆದಿದೆ. 

ಗಾಯಗೊಂಡ ಬೈಕ್ ಸವಾರನನ್ನು ಕರುಣಾ ಸಾಗರ್ ಎಂದು ಹೆಸರಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಅರ್ತಿಲ ಎಂಬಲ್ಲಿ ಮೊಹಮ್ಮದ್ ತೋಹೀರ್ ಎಂಬವರು ಚಲಾಯಿಸಿಕೊಂಡು ಬಂದ ಆಲ್ಟೋ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಸ್ತೆಗೆ ಬಿದ್ದ ಕರುಣಾ ಸಾಗರ್ ಅವರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಮಾಲಾಡಿ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ Rating: 5 Reviewed By: karavali Times
Scroll to Top