ಬಂಟ್ವಾಳ, ಮಾರ್ಚ್ 12, 2024 (ಕರಾವಳಿ ಟೈಮ್ಸ್) : ಸ್ಕೂಟರ್ ಮರಕ್ಕೆ ಡಿಕ್ಕಿ ಹೊಡೆದು ಸವಾರ ದಾರುಣವಾಗಿ ಮೃತಪಟ್ಟ ಘಟನೆ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಮಂಗಳವಾರ ಮುಂಜಾನೆ ವೇಳೆ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಅಮ್ಟಾಡಿ ನಿವಾಸಿ ಅಕ್ಷಿತ್ (25) ಎಂದು ಗುರುತಿಸಲಾಗಿದೆ.
ಅಕ್ಷಿತ್ ಅವರು ಮಂಗಳೂರಿನಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಮಾರಿಪಳ್ಳದಲ್ಲಿ ಚಾಲಕನ ನಿಯಂತ್ರಣ ಮೀರಿ ಸ್ಕೂಟರ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅಕ್ಷಿತ್ ಅವರನ್ನು ಸ್ಥಳೀಯರು ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮೃತರ ಭಾವ ವಸಂತ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















0 comments:
Post a Comment