ನೂಜಿಲೋಡಿ : ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು - Karavali Times ನೂಜಿಲೋಡಿ : ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು - Karavali Times

728x90

30 March 2024

ನೂಜಿಲೋಡಿ : ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ, ಮಾರ್ಚ್ 31, 2024 (ಕರಾವಳಿ ಟೈಮ್ಸ್) : ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ ದೋಚಿದ ಘಟನೆ ತಾಲೂಕಿನ ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. 

ಇಲ್ಲಿನ ನಿವಾಸಿ ಪ್ರಮೀಳಾ (37) ಎಂಬವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ. ಮಾರ್ಚ್ 26 ರ ರಾತ್ರಿಯಿಂದ 29ರ ಬೆಳಗ್ಗಿನ ಅವಧಿಯಲ್ಲಿ ಈ ಕಳ್ಳತನ ಕೃತ್ಯ ನಡೆದಿದೆ. ಮನೆಗೆ ನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿದ್ದ ಪ್ರಮೀಳಾ ಹಾಗೂ ಆಕೆಯ ಮಗಳ ಸುಮಾರು 43 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಕಳವುಗೈಯಲಾಗಿದೆ. ಕಳವಾಗಿರುವ ಸೊತ್ತುಗಳ ಮೌಲ್ಯ ಸುಮಾರು 2.15 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ನೂಜಿಲೋಡಿ : ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು Rating: 5 Reviewed By: karavali Times
Scroll to Top