ಬಂಟ್ವಾಳ, ಮಾರ್ಚ್ 28, 2024 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 127/2015 ಕಲಂ 457,380 ಐಪಿಸಿ ಪ್ರಕರಣದ ಆರೋಪಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಬಾಯರ್ ಪದವು ನಿವಾಸಿ ಇಬ್ರಾಹಿಂ ಮುಜಾಂಬಿಲ್ (28) ಎಂಬಾತನನ್ನು ವಿಟ್ಲ ಪೊಲೀಸರು ಬುಧವಾರ ಪುತ್ತೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.
ವಿಟ್ಲ ಪೆÇಲೀಸ್ ಠಾಣಾ ಪಿಎಸ್ಸೈ ಶ್ರೀಮತಿ ವಿಧ್ಯಾ ಹಾಗೂ ಸಿಬ್ಬಂದಿಗಳಾದ ಜಯರಾಮ, ಆಶೋಕ, ರಾಧಾಕೃಷ್ಣ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ಪುತ್ತೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂದಿತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ಎಪ್ರಿಲ್ 8ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಂಧಿತ ವಾರಂಟ್ ಆಸಾಮಿಯ ವಿರುದ್ದ ವಿಟ್ಲ ಠಾಣೆಯಲ್ಲಿ 2, ಕೇರಳ-ಮಂಜೇಶ್ವರ ಠಾಣೆಯಲ್ಲಿ 1, ಪುತ್ತೂರು ನಗರ ಠಾಣೆಯಲ್ಲಿ 1, ಅಂಧ್ರಪ್ರದೇಶದ ವಿಶಾಖಪಟ್ಟಣ ಠಾಣೆಯಲ್ಲಿ 1 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment