ತಲಪಾಡಿ : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ನಗರ ಠಾಣಾ ಪೊಲೀಸರು - Karavali Times ತಲಪಾಡಿ : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ನಗರ ಠಾಣಾ ಪೊಲೀಸರು - Karavali Times

728x90

17 March 2024

ತಲಪಾಡಿ : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ನಗರ ಠಾಣಾ ಪೊಲೀಸರು

ಬಂಟ್ವಾಳ, ಮಾರ್ಚ್ 17, 2024 (ಕರಾವಳಿ ಟೈಮ್ಸ್) : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ನಗರ ಠಾಣಾ ಪೊಲೀಸರು ಮರಳು ಸಹಿತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಂಡು ಚಾಲಕನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶನಿವಾರ ರಾತ್ರಿ ಬ್ರಹ್ಮರಕೂಟ್ಲು-ತಲಪಾಡಿ ಎಂಬಲ್ಲಿ ಬಂಟ್ವಾಳ ನಗರ ಪೆÇಲೀಸ್ ಠಾಣಾ ಪಿಎಸ್ಸೈ ರಾಮಕೃಷ್ಣ ನೇತೃತ್ವದ ಪೊಲೀಸರು ತಪಾಸಣೆಗಾಗಿ ಕೆಎ70 3611 ನೋಂದಣಿ ಸಂಖ್ಯೆಯ ಟಿಪ್ಪರ್ ಲಾರಿಯನ್ನು ತಡೆದು ವಿಚಾರಿಸಿದಾಗ ಈ ಅಕ್ರಮ ಮರಳು ಸಾಗಾಟ ಬೆಳಕಿಗೆ ಬಂದಿದೆ. ವಳಚ್ಚಿಲ್ ಎಂಬಲ್ಲಿನ ನೇತ್ರಾವತಿ ನದಿಯಿಂದ ಮರಳನ್ನು ಕಳ್ಳತನ ಮಾಡಿಕೊಂಡು ಸಾಗಾಟ ಮಾಡುತ್ತಿರುವ ಬಗ್ಗೆ ಚಾಲಕ ಒಪ್ಪಿಕೊಂಡಿದ್ದು, ಆತನ ವಿರುದ್ದ ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ತಲಪಾಡಿ : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ನಗರ ಠಾಣಾ ಪೊಲೀಸರು Rating: 5 Reviewed By: karavali Times
Scroll to Top