ಫರಂಗಿಪೇಟೆ ಹಾಗೂ ಸಜಿಪನಡುವಿನಲ್ಲಿ ಪ್ರತ್ಯೇಕ ದಾಳಿ ನಡೆಸಿ ಇಬ್ಬರು ಗಾಂಜಾ ವ್ಯಸನಿಗಳನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times ಫರಂಗಿಪೇಟೆ ಹಾಗೂ ಸಜಿಪನಡುವಿನಲ್ಲಿ ಪ್ರತ್ಯೇಕ ದಾಳಿ ನಡೆಸಿ ಇಬ್ಬರು ಗಾಂಜಾ ವ್ಯಸನಿಗಳನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times

728x90

5 April 2024

ಫರಂಗಿಪೇಟೆ ಹಾಗೂ ಸಜಿಪನಡುವಿನಲ್ಲಿ ಪ್ರತ್ಯೇಕ ದಾಳಿ ನಡೆಸಿ ಇಬ್ಬರು ಗಾಂಜಾ ವ್ಯಸನಿಗಳನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಬಂಟ್ವಾಳ, ಎಪ್ರಿಲ್ 05, 2024 (ಕರಾವಳಿ ಟೈಮ್ಸ್) : ಫರಂಗಿಪೇಟೆ ಹಾಗೂ ಸಜಿಪನಡುವಿನಲ್ಲಿ ಶುಕ್ರವಾರ ಪ್ರತ್ಯೇಕ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಇಬ್ಬರು ಗಾಂಜಾ ವ್ಯಸನಿಗಳನ್ನು ದಸ್ತಗಿರಿ ಮಾಡಿದ್ದಾರೆ. 

ಬಂಧಿತ ಆರೋಪಿಗಳನ್ನು ಪುದು ಗ್ರಾಮದ ಫರಂಗಿಪೇಟೆ ಸಮೀಪದ ಕುಂಪಣಮಜಲು ನಿವಾಸಿ ಮಹಮ್ಮದ್ ಮುಸ್ತಫಾ  ಕೆ (34) ಹಾಗೂ ಸಜಿಪನಡು ಗ್ರಾಮದ ಕುಂಟಲ್ ಗುಡ್ಡೆ ನಿವಾಸಿ ಅಬ್ದುಲ್ ಜಬ್ಬಾರ್ ಎಂದು ಹೆಸರಿಸಲಾಗಿದೆ. 

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪ್ರತ್ಯೇಕವಾಗಿ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತ ಠಾಣಾ ಪಿಎಸ್ಸೈಗಳಾದ ಹರೀಶ್ ಎಂ ಆರ್ ಹಾಗೂ ಮೂರ್ತಿ ಅವರ ನೇತೃತ್ವದ ಪೆÇಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಮಾದಕವಸ್ತು  ಸೇವಿಸಿರುವ ಬಗ್ಗೆ ಅನುಮಾನಗೊಂಡು, ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಫರಂಗಿಪೇಟೆ ಹಾಗೂ ಸಜಿಪನಡುವಿನಲ್ಲಿ ಪ್ರತ್ಯೇಕ ದಾಳಿ ನಡೆಸಿ ಇಬ್ಬರು ಗಾಂಜಾ ವ್ಯಸನಿಗಳನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು Rating: 5 Reviewed By: karavali Times
Scroll to Top