ಬಂಟ್ವಾಳ, ಎಪ್ರಿಲ್ 23, 2024 (ಕರಾವಳಿ ಟೈಮ್ಸ್) : ಬಂಟ್ವಾಳ ಪುರಸಭೆಯ ಕುಡಿಯುವ ನೀರಿಗಾಗಿ ನೇತ್ರಾವತಿ ನದಿಯನ್ನು ಅವಲಂಭಿಸಿದ್ದು, ಪ್ರಸ್ತುತ ಬೇಸಿಗೆ ಕಾಲದಲ್ಲಿ ನೇತ್ರಾವಲ್ಲಿ ನದಿಯಲ್ಲಿ ನೀರಿನ ಒಳ ಹರಿವು ಕಡಿಮೆ ಆಗಿರುವುದರಿಂದ ಸಾರ್ವಜನಿಕರಿಗೆ ನೀರಿನ ಪೂರೈಕೆ ಮಾಡುತ್ತಿದ್ದರೂ, ಮುಂದಕ್ಕೆ ಮಳೆ ಬಾರದೇ ಇದ್ದಲ್ಲಿ ಸೂಕ್ತ ಸಮಯಕ್ಕೆ ನೀರಿನ ಪೂರೈಕೆಗೆ ಅನಾನುಕೂಲವಾಗುವ ಸಂಭವವಿರುತ್ತದೆ.
ಸಾರ್ವಜನಿಕರು ಈ ನಿಟ್ಟಿನಲ್ಲಿ ಕುಡಿಯುವ ನೀರನ್ನು ಕೃಷಿ, ಕೈಗಾರಿಕೆ, ವಾಣಿಜ್ಯ ಉದ್ದೇಶಕ್ಕೆ ಬಳಸದೇ ಅವಶ್ಯಕತೆಗೆ ತಕ್ಕಂತೆ ಮಿತವಾಗಿ ಬಳಸಲು ಸೂಚಿಸಲಾಗಿದೆ. ನೀರಿನ ದುರುಪಯೋಗ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment