ಬಂಟ್ವಾಳ, ಎಪ್ರಿಲ್ 23, 2024 (ಕರಾವಳಿ ಟೈಮ್ಸ್) : ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದ ಚುನಾವಣಾ ಪ್ರಚಾರ ಉಸ್ತುವಾರಿ, ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ, ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ರಾಮಯ್ಯ ಪರವಾಗಿ ಎಪ್ರಿಲ್ 24 ರಂದು (ನಾಳೆ) ಮೆಲ್ಕಾರಿನಿಂದ ಬೃಹತ್ ರೋಡ್ ಶೋ ಹಾಗೂ ಸಜಿಪಮೂಡ ಗ್ರಾಮದ ಸುಭಾಶ್ ನಗರ (ಬೇಂಕೆ) ಜಂಕ್ಷನ್ನಿನ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಬಹಿರಂಗ ಚುನಾವಣಾ ಪ್ರಚಾರ ಸಭೆ ನಡೆಯಲಿದೆ.
ಈ ಬಾರಿ ಜಿಲ್ಲೆಯಲ್ಲಿ ಮಹತ್ತರ ಬದಲಾವಣೆಯ ಗಾಳಿ ಬೀಸುತ್ತಿದ್ದು, ಎಲ್ಲ ಪಂಚಾಯತ್ ಮೂಲೆಗಳಲ್ಲೂ ಕಾಂಗ್ರೆಸ್ ಪರ ಅಲೆ ಭಾರೀ ಪ್ರಮಾಣದಲ್ಲಿದೆ. ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಜನ ಕಾಂಗ್ರೆಸ್ ಪರ ಮತದಾನ ಮಾಡಲು ತುದಿಗಾಲಲ್ಲಿ ನಿಂತಿದ್ದು, ಈ ಬಾರಿ ಮತ್ತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಧ್ವಜ ಹಾರಾಡಲಿದೆ. ಈ ನಿಟ್ಟಿನಲ್ಲಿ ನಾಳೆ ನಡೆಯುವ ಕೊನೆಯ ಬಹಿರಂಗ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಹಂತದ ನಾಯಕರು, ಕಾರ್ಯಕರ್ತರು ಹಾಗೂ ಮತದಾರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಜಿಪಮುನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಯೂಸುಫ್ ಕರಂದಾಡಿ ಪತ್ರಿಕಾ ಹೇಳಿಕೆಯಲ್ಲಿ ಕೋರಿದ್ದಾರೆ.
0 comments:
Post a Comment